ವಿವಿಗೆ ಸಾಲುಮರದ ತಿಮ್ಮಕ್ಕ ಹೆಸರಿಡಿ; ಎಚ್‌.ಆಂಜನೇಯ

ವಿವಿಗೆ ಸಾಲುಮರದ ತಿಮ್ಮಕ್ಕ ಹೆಸರಿಡಿ; ಎಚ್‌.ಆಂಜನೇಯ

             ಚಿತ್ರದುರ್ಗ 17: ಸಾಲುಮರದ ತಿಮ್ಮಕ್ಕ ಸೇರಿ ಅನೇಕ ಸಾಮಾನ್ಯ ಮಹಿಳೆಯರು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ವೃಕ್ಷಮಾತೆ ಎಂದೇ ಗುರುತಿಸಿಕೊಂಡಿರುವ ಸಾಲುಮರದ ತಿಮ್ಮಕ್ಕಳ ಹೆಸರನ್ನು ಸ್ಮರಣೀಯಗೊಳಿಸಬೇಕಿದೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಹೇಳಿದರು. 

              ತಾಲೂಕಿನ ಸೀಬಾರ ಗ್ರಾಮದ ತಮ್ಮ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಮಾದಾರ ಮಹಾಸಭಾ ವತಿಯಿಂದ ಆಯೋಜಿಸಿದ್ದ ಸಾಲುಮರದ ತಿಮ್ಮಕ್ಕ ನುಡಿನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. 

            ವಿಶ್ವವಿದ್ಯಾಲಯಕ್ಕೆ ತಿಮ್ಮಕ್ಕ ಹೆಸರನ್ನು ನಾಮಕರಣ ಗೊಳಿಸಬೇಕು. ಸಾವಿರ ಎಕರೆಗೂ ಹೆಚ್ಚು ಭೂಮಿಯಲ್ಲಿ ಅವರ ಹೆಸರಿನಲ್ಲಿ ರಾಷ್ಟ್ರೀಯ ಉದ್ಯಾನವನ ಸ್ಥಾಪಿಸಬೇಕು. ಅವರ ಪುತ್ರನ ನೇತೃತ್ವದಲ್ಲಿ ಟ್ರಸ್ಟ್‌ ಸ್ಥಾಪಿಸಲು ಒಂದೇರಡು ಎಕರೆ ಭೂಮಿ ಕೊಟ್ಟು, ಟ್ರಸ್ಟ್‌ ಮೂಲಕ ಪರಿಸರ ಜಾಗೃತಿ ಮೂಡಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದರು. 

           ಕಾಂಗ್ರೆಸ್ ಎಸ್ಸಿ ವಿಭಾಗದ ತಾಲೂಕು ಅಧ್ಯಕ್ಷ ಅನಿಲ್ ಕೋಟಿ, ಹೊಳಲ್ಕೆರೆ ಕಾಂಗ್ರೆಸ್ ಮಾಧ್ಯಮ ವಿಭಾಗದ ಕಿರಣ್ ಶಿವಪುರ, ಅಜಾದ್ ನಗರ ಗ್ರಾಪಂ ಮಾಜಿ ಸದಸ್ಯ ದಾದಾಪೀರ್, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮುನೀರಾ, ಒಬಿಸಿ ಘಟಕದ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ಭೀಮಸಮುದ್ರ, ಚೇತನ್ ಬೋರೇನಹಳ್ಳಿ ಇತರರಿದ್ದರು. 


ಸುದ್ದಿ ಓದಿ