ನಂದಿಹಳ್ಳಿ : ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ
Nandihalli: Kanthi Basaveshwara Swamy Chariot Festival
ಹೂವಿನಹಡಗಲಿ 25: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ ಗುರುವಾರ ಸಂಜೆ ವಿಜೃಂಭಣೆಯಿಂದ ಜರುಗಿತು.ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಗೊಂಬೆ ಕುಣಿತ ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಇದಕ್ಕೂ ಮುನ್ನ ಜರುಗಿದ ನಿಶಾನೆ ಹರಾಜಿನಲ್ಲಿ ಕಂಠಿ ಯುವರಾಜ 1.60 ಲಕ್ಷಕ್ಕೆ ಸ್ವಾಮಿಯ ಪಟ ಪಡೆದರು. ಕಂಠಿಬಸವೇಶ್ವರ ಟ್ರಸ್ಟ್ ಕಮಿಟಿ ಅದ್ಯಕ್ಷ ವಿ.ಬಿ.ಕರಿಬಸವರಾಜ ಪದಾಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು. ನಂದಿಹಳ್ಳಿ ಸುತ್ತಮುತ್ತಲ ಗ್ರಾಮಗಳ ಅಪಾರ ಜನರು ಭಾಗವಹಿಸಿದ್ದರು. ಬುಧವಾರ ಕಂಠಿ ಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಸಂಭ್ರಮದಿಂದ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 