ನಂದು ಗಡಗಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರೆ್ಡ
Nandu Gadgi officially joined the BJP party
ವಿಜಯಪುರ 01 : ನಗರ ಶಾಸಕ ಬಸನಗೌಡ ಪಾಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಯುವ ಮುಖಂಡ ನಂದು ಗಡಗಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೆಂದ್ರ ಅವರ ನಾಯಕತ್ವವನ್ನ ಒಪ್ಪಿಕೊಂಡು ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹಾಗೂ ವಿಜಯಪುರ ನಗರ ಮಂಡಲ ಅಧ್ಯಕ್ಷರಾದ ಸಂದೀಪ್ ಪಾಟೀಲ್ ಸಮ್ಮುಖದಲ್ಲಿ ಬಾಗಲಕೋಟೆ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರೆ್ಡಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲಾದ ಹಿರಿಯ ನಾಯಕರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.ದೇಶದ ಪ್ರಧಾನಿ ಮೋದಿ ಅವರ ನಾಯಕತ್ವ ಹಾಗೂ ವಿಜಯೆಂದ್ರ ಅವರ ನಾಯಕತ್ವ ಹಾಗೂ ತತ್ವ ಸಿದ್ದಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಬಂದಿದ್ದೇನೆ. ಜಿಲ್ಲೆಯಲ್ಲಿ ಪಕ್ಷದ ಬೆಳೆವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನಂದು ಗಡಗಿ ತಿಳಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 