ರಾಷ್ಟ್ರ ಮಟ್ಟದ 37ನೇ ಯುವಜನೋತ್ಸವ ಸ್ಪರ್ಧೆ ಗುವಿವಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ರಾಷ್ಟ್ರ ಮಟ್ಟದ 37ನೇ ಯುವಜನೋತ್ಸವ ಸ್ಪರ್ಧೆ  ಗುವಿವಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ


 ರಾಷ್ಟ್ರ ಮಟ್ಟದ 37ನೇ ಯುವಜನೋತ್ಸವ ಸ್ಪರ್ಧೆ  ಗುವಿವಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ   


ಕಲಬುರಗಿ 03: ಪಂಜಾಬಿನ ಲುದಿಯಾನದಲ್ಲಿ ನಡೆದ ಅಂತರ್ ವಿಶ್ವವಿದ್ಯಾಲಯ ರಾಷ್ಟ್ರ ಮಟ್ಟದ ಯುವಜನೋತ್ಸವದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ದೃಶ್ಯಕಲಾ ಅಧ್ಯಯನ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಷ್ಠಾಪನೆ ಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಪಡೆದಿರುವ ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಪಶಸ್ತಿ ಪತ್ರ ನೀಡಿ ಅಭಿನಂದಿಸಿದರು.  

ಕುಲಸಚಿವ ಪ್ರೊ. ರಾಜನಾಳ್ಕರ್ ಲಕ್ಷ್ಮಣ, ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ರಮೇಶ್ ಲಂಡನ್ಕರ್, ಕಲಾ ನಿಕಾಯದ ಡೀನ್ ಪ್ರೊ. ಅಬ್ದುಲ್ ರಬ್ ಉಸ್ತಾದ್, ತಂಡದ ವ್ಯವಸ್ಥಾಪಕ ಡಾ. ಶಾಹೆದ್ ಪಾಶಾ ಉಪಸ್ಥಿತರಿದ್ದರು. ದೃಶ್ಯಕಲಾ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಾದ ಬೀರೇಶ್ ಪೂಜಾರಿ, ಹಾಜಮಾ ಎಚ್, ಗುರುರಾಜ ವಗ್ಗ ಹಾಗೂ ಶಿವಶರಣ ಇವರು ಅಂತರ್ ವಿಶ್ವವಿದ್ಯಾಲಯ ರಾಷ್ಟ್ರ ಮಟ್ಟದ ಪ್ರತಿಷ್ಠಾಪನೆ ಕಲೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಪ್ರಾದ್ಯಾಪಕರು, ಅತಿಥಿ ಅಧ್ಯಾಪಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ. 


ಸುದ್ದಿ ಓದಿ