ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತ್
National Lok Adalat on December 13
ಬಳ್ಳಾರಿ 10: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 13 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.
ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ.
ಹೆಚ್ಚಿನ ಮಾಹಿತಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 