ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
National Lok Adalat on March 14
ಬಳ್ಳಾರಿ 12: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾ.14 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.
ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು. ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ. ಪೂರ್ವಭಾವಿ ಬೈಠಕ್ ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್ಎಎಲ್ಎಸ್ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 