ರಾಷ್ಟ್ರೀಯ ಏಕತಾ ದಿವಸ ಆಚರಣೆ

ರಾಷ್ಟ್ರೀಯ ಏಕತಾ ದಿವಸ ಆಚರಣೆ

ಬಳ್ಳಾರಿ01: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ ಅವರು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು.

  ಇದೇ ಸಂದರ್ಭದಲ್ಲಿ ಮಾತನಾಡಿದ ಎಡಿಸಿ ಸೋಮಶೇಖರ ಅವರು, ಉಕ್ಕಿನ ಮನುಷ್ಯರೆಂದೆ ಖ್ಯಾತರಾದ ಸದರ್ಾರ್ ವಲ್ಲಭಬಾಯಿ ಪಟೇಲ್ ಅವರು ಆಧುನಿಕ ಭಾರತ ನಿಮರ್ಾಣದಲ್ಲಿ ಅಗ್ರಗಣ್ಯ ನಾಯಕರು. ಸ್ವಾತ್ರಂತ ಭಾರತದಲ್ಲಿ 560 ಸಂಸ್ಥಾನಗಳನ್ನು ಭಾರತದ ಅಡಿಗೆ ತಂದು ಭಾರತದ ಏಕತೆ,ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದರು.

   ಸದರ್ಾರ್ ವಲ್ಲಭಬಾಯಿ ಪಟೇಲ್ ಅವರ ಹೆಸರಿನಲ್ಲಿ ನಾವು ಆಚರಿಸುತ್ತಿರುವ ಮತ್ತು ಸ್ವೀಕರಿಸುತ್ತಿರುವ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆಯು ವಿವಿಧತೆಯಲ್ಲಿ ಏಕತೆಯುಳ್ಳ ಅಖಂಡ ಭಾರತದ ಪ್ರಜೆಗಳು ನಾವು ಎನ್ನುವ ಹೆಮ್ಮೆ ಮತ್ತು ಅಭಿಮಾನಗಳನ್ನು ನಮ್ಮಲ್ಲಿ ಜಾಗೃತಗೊಳಿಸಬೇಕು ಎಂದರು.

     ಭಾರತವನ್ನು ಶಕ್ತಿಶಾಲಿ ರಾಷ್ಟ್ರನಿಮರ್ಾಣ ಮಾಡುವ ನಿಟ್ಟಿನಲ್ಲಿ ನಮ್ಮದೇ ಆದ ಸೇವೆ ಮತ್ತು ಕೊಡುಗೆ ಸಲ್ಲಿಸಬೇಕು ಎಂದರು.

     ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಇದ್ದರು.

ಸುದ್ದಿ ಓದಿ