ವಿಠಲ್ ನಾಯ್ಕ ಅವರಿಗೆ ರಾಷ್ಟ್ರೀಯ ಸಮಾಜ ಭೂಷಣ ಪ್ರಶಸ್ತಿ
National Samaj Bhushan Award for Vittal Naik
ಲೋಕದರ್ಶನ ವರದಿ
ಮಾಂಜರಿ 02: ರಾಜರ್ಷಿ ಛತ್ರಪತಿ ಶಾಹು ಮಹಾರಾಜ ಜಯಂತಿ ನಿಮಿತ್ತ ಕೊಲ್ಲಾಪುರದಲ್ಲಿ ಮಹಾರಾಷ್ಟ್ರ ರಾಜ್ಯ ಅರ್ಹ ಕಾರ್ಮಿಕರ ಸಂಘ ಮತ್ತು ನಾಗರಿಕ ಸೇವಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ವಿಠಲ ನಾಯಿಕ ಅವರಿಗೆ ರಾಷ್ಟ್ರೀಯ ಸಮಾಜಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೊ. ನಾಯಿಕ ಅವರ ಶಿಕ್ಷಣ, ಸಾಮಾಜಿಕ ಸೇವೆ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿನ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಲ್ಲಾಪುರ ಸಂಸದ ಛತ್ರಪತಿ ಶಾಹು ಮಹಾರಾಜ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸತೇಜ್ ಪಾಟೀಲ, ಸಂಘದ ಅಧ್ಯಕ್ಷ ಸುರೇಶ ಕೇಸರಕರ ಮತ್ತು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ನಿಪ್ಪಾಣಿ ತಾಲೂಕಿನ ಭೀಮಾಪುರವಾಡಿ ಮೂಲದರಾಗಿದ್ದು, ಪ್ರಸ್ತುತ ಚಿಕ್ಕೋಡಿಯಲ್ಲಿವಾಸಿಸುತ್ತಿರುವ ಪ್ರೊ. ವಿಠಲ್ ನಾಯಕ್ ಅವರಿಗೆ ಸಿಎಂ ಡಿ.ಎಡ್ ಮಹಾವಿದ್ಯಾಲಯದಲ್ಲಿ ಉಪಪ್ರಾಂಶುಪಾಲರಾಗಿ ಮತ್ತು ಉತ್ತೂರಿನ ಡಾ. ಜೆ.ಪಿ. ನಾಯಿಕ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 