ರಾಷ್ಟ್ರೀಯ ಸೇವಾ ಯೋಜನೆ: ಹತ್ತರಗಿಯ ಕಾರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ
National Service Scheme: Cleanliness programme at the premises of Karimath, Hataragi
ಯಮಕನಮರಡಿ 22: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಎರಡನೇ ದಿನ ಹತ್ತರಗಿಯ ಕಾರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಆವರಣವನ್ನು ಅಚ್ಚುಕಟ್ಟಾಗಿ ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರಾದ ಹನುಮಂತ ಗಾಡಿ ವಡ್ಡರ್, ಕಾಂಗ್ರೆಸ್ ಮುಖಂಡರು ಪಾಂಡುರಂಗ ಗಾಡಿ ವಡ್ಡರ್‌ರವರು ಹಾಜರಿದ್ದು ಶಿಬಿರಾರ್ಥಿಗಳ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘೀಸಿದರು. ಅದರಂತೆ ಶಿಬಿರದಲ್ಲಿ ಮದ್ಯಾಹ್ನದ ನಂತರ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ನಿಮ್ಹಾನ್ಸ ನ ಎಪಿಡಿಮಿಯಾಲಜಿ ವಿಭಾಗ ಹಾಗೂ ಯುವ ಸ್ಪಂಧನ ಕೇಂದ್ರ ಬೆಳಗಾವಿ ಯುವ ಸಮಾಲೋಚಕರಾದ ಕುಮಾರ ಖೋತ, ಯುವ ಪರಿವರ್ತಕರಾದ ಸರಸ್ವತಿ ಗುರುಪಾದಗೋಳ ಹಾಗೂ ಡಿ.ಎ.ಎಸ್.ಎಪ್.ಬೆಳಗಾವಿಯ ಬಾಳಯ್ಯ ಮಠಪತಿ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯಗಳನ್ನು ತಿಳಿಸಿಕೊಟ್ಟಿರುವುದು ವಿಶೇಷವಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪನ್ಯಾಸಕ ಎ.ಎ.ಕಿವಂಡಾ ವಹಿಸಿದ್ದರು. ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್ ತಬರಿ ಈ ಸಂದರ್ಭದಲ್ಲಿ ಹಾಜರಿದ್ದರು. ಕಾರ್ಯಮವನ್ನು ಶಿಬಿರಾರ್ಥಿಗಳೆ ಸಂಘಟಿಸಿ ನಿರೂಪಣೆ ಹಾಗೂ ವಂದನೆಗಳನ್ನು ಸಲ್ಲಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 