ಈಶಾನ್ಯ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ
Northeastern teachers register their names in the voter list
ಈಶಾನ್ಯ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ
ಬಳ್ಳಾರಿ 17: ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಕಲಬುರಗಿ ವಿಭಾಗ ಇವರ ಅದೇಶದ ಮೇರೆಗೆ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ನಿಗದಿಪಡಿಸಿ ಆದೇಶಿಸಿದೆ. ಅದರಂತೆ ಅರ್ಹತಾ ದಿನಾಂಕವು 01 ನವಂಬರ್ 2025 ಆಗಿದ್ದು ಅರ್ಹ ಮತದಾರರು ನಿಗದಿತ ನಮೂನೆ-19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 01 ನೇ ನವೆಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಠ 3 ವರ್ಷ ಭೋದನಾ ವೃತ್ತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ-2 ರಲ್ಲಿ ಪ್ರಮಾಣ ಪತ್ರದೊಂದಿಗೆ ತಾಲೂಕು ಕಛೇರಿಗೆ ಸಲ್ಲಿಸುವಂತೆ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರತಿ ವರ್ಷ ಹೊಸದಾಗಿ ತಯಾರಿಸುವುದರಿಂದ ಈ ಹಿಂದೆ ತಯಾರಿಸಲಾದ ಮತದಾರರ ಪಟ್ಟಿಯಲ್ಲಿ ಹೆಸರು ಸೇರೆ್ಡಯಾಗಿರುವ ಮತದಾರರು ಸಹ ಹೊಸದಾಗಿ ನಮೂನೆ 9 ರಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಆದ್ದರಿಂದ ನಮೂನೆ 9 ಅರ್ಜಿಯನ್ನು ಸಲ್ಲಿಸಲು ನವೆಂಬರ್ 6 ಕೊನೆಯ ದಿನವಾಗಿದ್ದು ನವೆಂಬರ್ 25 ರಂದು ಕರಡು ಮತದಾರರ ಪಟ್ಟಿ ಪ್ರಚಾರಪಡಿಸಿ ನವೆಂಬರ್ 25 ರಿಂದ ಡಿಸೆಂಬರ್ 1 ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದು ತಹಶೀಲ್ದಾರರು, ರೇಖಾ .ಟಿ ಯವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 