ಕುಷ್ಠ ರೋಗ ನಿಯಂತ್ರಣಕ್ಕೆ ಸೂಕ್ತ ಜಾಗೃತಿ ಮೂಡಿಸಲು ಸೂಚನೆ
ವಿಜಯಪುರ 16: ಕುಷ್ಠ ರೋಗ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಜನರಿಗೆ ಡಂಗುರದ ಮೂಲಕ ಅರಿವು ಮೂಡಿಸಬೇಕು. ಎಲ್ಲ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಹಶೀಲ್ದಾರ ರವೀಚಂದ್ರನ್ ಸೂಚನೆ ನೀಡಿದರು.
ನಗರದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಲಾದ ತಾಲೂಕಾ ಮಟ್ಟದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎಲ್ಲ ಇಲಾಖೆಗಳು ಸಕ್ರೀಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾತಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.
ತಾಲೂಕಾ ಆರೋಗ್ಯ ಅಧಿಕಾರಿ ಡಾ.ಗುಂಡಬಾವಡಿ ಅವರು ಮಾತನಾಡಿ, ಕುಷ್ಠರೋಗದ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಮಾಡುವುದರ ಜೊತೆಗೆ ರೋಗದ ಗುಣ ಲಕ್ಷಣಗಳ ಕುರಿತು ಮಾಹಿತಿ ನೀಡಬೇಕು. ಸಾಮಾನ್ಯವಾಗಿ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಚರ್ಮದ ಮೇಲೆ ಕಂಡು ಬರುವ ತಿಳಿಬಿಳಿ ತಾಮ್ರ ವರ್ಣದ ಮಚ್ಚೆ ಕಂಡು ಬಂದಾಗ ಇದರ ಮೇಲೆ ಸ್ಪರ್ಶ ಜ್ಞಾನ ಇಲ್ಲದೇ ಇರುವುದು, ಆ ಜಾಗದಲ್ಲಿ ಕೂದಲು ಬರದೇ ಇರುವುದು ಹಾಗೂ ಬೆವರು ಬರೆದೆ ಇರುವುದು ಕುಷ್ಠರೋಗದ ಲಕ್ಷಣಗಳಾಗಿವೆ. ಇಂತಹ ಸಮಯದಲ್ಲಿ ಆರೋಗ್ಯ ಕೇಂದ್ರಕ್ಕೆ ಅಥವಾ ಆಶಾ ಕಾರ್ಯಕತರ್ೆಯರು, ಅಥವಾ ಕಿರಿಯ ಆರೋಗ್ಯ ಸಹಾಯಕಿಯರನ್ನು ಸಂಪಕರ್ಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಸಹಾಯಕ ಕುಷ್ಠರೋಗ ಅಧಿಕಾರಿಗಳು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ನಗರ ವಲಯ ಹಾಗೂ ಗ್ರಾಮೀಣ ವಲಯ, ನಗರ ಹಾಗೂ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕಾ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್.ಬಾಗವಾನ್ ಸ್ವಾಗತಿಸಿದರು. ಆಪ್ತ ಸಮಾಲೋಚಕ ಗೋಪಾಲ ರಬಕವಿ ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 