ಮಳೆ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ -ಸಚಿವ ಸತೀಶ ಜಾರಕಿಹೊಳಿ
Notice to take precautionary measures to face rain shortage - Minister Satish Jarakiholi
ಲೋಕದರ್ಶನ ವರದಿ
ಹಾವೇರಿ 03: ಪ್ರಸ್ತುತ ರಾಜ್ಯದಲ್ಲೇ ಹಾವೇರಿ ಜಿಲ್ಲೆಯಲ್ಲಿ ಮಳೆ ಚನ್ನಾಗಿ ಆಗಿದೆ ಹಾಗೂ ಬೆಳೆ ಸಹ ಉತ್ತಮವಾಗಿದೆ. ಬರುವ ಎರಡು ತಿಂಗಳ ನಂತರ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಗಾಗಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಲೋಕೋಪಯೋಗಿ ಹಾಗೂ ಹಾವೇರಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಮೇಲುಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಾವೇರಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಗತಿ ಪರೀಶೀಲನಾ ಸಭೆ ನಡೆಸಿದ ಅವರು, ನೂರು ವರ್ಷಗಳ ನಂತರ ಇಂತಹ ಬರಗಾಲ ಬಂದಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತ ಇದನ್ನು ಸನ್ನದ್ಧವಾಗಿ ಎದುರಿಸಲು, ಪರಿಸ್ಥಿತಿ ತಿಳಿದುಕೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ನನ್ನನ್ನು ಜಿಲ್ಲೆಗೆ ಕಳುಹಿಸಿದ್ದಾರೆ.
ಇಲ್ಲಿನ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಲಾಗುವುದು ಎಂದರು. ಕೆರೆ ತುಂಬಿಸಿ: ನೀರಿನ ಸಮಸ್ಯೆ ಪರಿಹಾರಕ್ಕೆ ಕೆರೆ ತುಂಬಿಸುವುದು ಬಹಳ ಸೂಕ್ತವಾಗಿದ್ದು, ಈಗ ವರದಾ ನದಿಯಲ್ಲಿ ನೀರು ಬರುತ್ತಿದೆ, ಇಂದಿನಿಂದಲೇ ಕೆರೆ ತುಂಬಿಸುವ ಕಾರ್ಯ ಆರಂಭಿಸಬೇಕು. ಕೆರೆಗಳಿಗೆ ನೀರು ತುಂಬಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಣ್ಣ ನೀರಾವರಿ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾ.ಪಂ.ಗಳಿಗೆ ಟ್ಯಾಂಕರ್ ಖರೀದಿಸಿ: ಪ್ರತಿ ಗ್ರಾಮ ಪಂಚಾಯತಿಯಿಂದ ಹಂತ ಹಂತವಾಗಿ ಒಂದು ಟ್ಯಾಂಕರ್ ಖರೀದಿಸಿ, ಇದರಿಂದ ತುಂಬಾ ಅನುಕೂಲವಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಪ್ರತಿ ಗ್ರಾ.ಪಂ.ನಲ್ಲಿ ಟ್ಯಾಂಕರ್ ಖರೀದಿಸಲಾಗಿದೆ. ಇದರಿಂದ ಸ್ಥಳೀಯವಾಗಿ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಹೊಸ ಬ್ಯಾರೇಜ್‌ಗೆ ಜಾಗ ಗುರುತಿಸಿ: ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲೆಯಲ್ಲಿ ಹೊಸ ಬ್ಯಾರೇಜ್ ನಿರ್ಮಾಣ ಮಾಡಲು ಎಲ್ಲೆಲ್ಲಿ ಅವಕಾಶವಿದೆ ಎಂದು ಪಟ್ಟಿಮಾಡಿ ಜಿಲ್ಲಾಧಿಕಾರಿಗಳಿಗೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 