ರಸ್ತೆ ಸುಧಾರಣಾ ಕಾಮಗಾರಿಗೆ ಅಧಿಕೃತ ಚಾಲನೆ
Official launch of road improvement work
ಯರಗಟ್ಟಿ, 10 : ಸಮೀಪದ ಗುಡುಮಕೇರಿ ಗ್ರಾಮದಲ್ಲಿ 70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ನನ್ನ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಗುಡಮಕೇರಿ ಕ್ರಾಸ್‌ನಿಂದ ಗುಡಮಕೇರಿ ಗ್ರಾಮದವರೆಗೆ ಸುಮಾರು ?70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ.ಗುಡಮಕೇರಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಹಾಗೂ ರೈತ ಬಾಂಧವರ ಸಂಚಾರಕ್ಕೆ ಅನುಕೂಲವಾಗಲಿದೆ.
ಸುಸಜ್ಜಿತ ರಸ್ತೆಗಳ ಮೂಲಕ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನೂ ಪ್ರಗತಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಪ್ರೀತಿಸುತ್ತಿದ್ದೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ಇಲಾಖೆಯ ಅಧಿಕಾರಿಗಳಾದ ಎಚ್. ಎ. ಕದ್ರಾಪೂರಕರ, ಬಸವರಾಜ ಅಯ್ಯನಗೌಡ್ರ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಉಮೇಶ ಮಾಗುಂಡನವರ, ರಾಜು ಯರಗಣವಿ, ಸತ್ಯನಾಯ್ಕ ನಾಯ್ಕರ, ಮಲಿಕಸಾಬ ಬಾಗವಾನ, ನಿಖಿಲ ಪಾಟೀಲ, ವಾಚಪೆ ಗುಡುಮಕೇರಿ, ಸತ್ಯಪ್ಪ ಆಡಕಾರ, ಫಕ್ಕೀರ್ಪ ಮಾದನ್ನವರ, ಭೀಮಶಿ ಪಾಟೀಲ, ಮಾರುತಿ ತಳವಾರ, ಹನಮಂತ ಶೆಟ್ಟೇಪ್ಪನ್ನವರ, ಶಿವಪ್ಪ ಪುಡಕಲಕಟ್ಟಿ ಸ್ಥಳೀಯ ಮುಖಂಡರು ಹಾಗೂ ಗ್ರಾಮದ ಹಿರಿಯರು ಮತ್ತು ಯುವ ಮಿತ್ರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 