ಅಧಿಕಾರಿಗಳು ಜನರಿಗೆ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸಬೇಕು: ವಿ.ಎಸ್.ಉಗ್ರಪ್ಪ

ಅಧಿಕಾರಿಗಳು ಜನರಿಗೆ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸಬೇಕು: ವಿ.ಎಸ್.ಉಗ್ರಪ್ಪ

ಬಳ್ಳಾರಿ 10:ಕೇಂದ್ರ ಹಾಗೂ ರಾಜ್ಯ ಸಕರ್ಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ, ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರೊಂದಿಗೆ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದು ಲೋಕಸಭಾ ಸದಸ್ಯ ವಿ.ಎಸ್.ಉಗ್ರಪ್ಪ ಅವರು ಹೇಳಿದರು.

   ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಗುರುವಾರದಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸುವ ಕೂಲಿಕಾಮರ್ಿಕರಿಗೆ ಸಕಾಲದಲ್ಲಿ ಹಣವನ್ನು ಪಾವತಿಸಬೇಕು. ಇದಕ್ಕೆ ಬೇಕಾದ ಅನುದಾನವನ್ನು ಸಕರ್ಾರದಿಂದ ಪಡೆದುಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.  ಕೋಟೆ ಪ್ರದೇಶ ವ್ಯಾಪ್ತಿಯಲ್ಲಿ ವಿವಿಧ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಕೋಟೆ ಪ್ರದೇಶದಲ್ಲಿ ಪ್ರವಾಸಿಗರಿಗೆ ರಕ್ಷಣೆ, ಶುದ್ಧ ಕುಡಿಯುವ ನೀರು, ಶೌಚಾಲಯ ಹಾಗು ಮೂಲಭೂತ ಸೌಕರ್ಯ ಇರುವುದಿಲ್ಲ ಇದನ್ನು ಶೀಘ್ರವೇ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಸೋಮ್ಲನಾಯ್ಕ ಅವರಿಗೆ ಸೂಚಿಸಿದ ಅವರು, ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಪ್ರಕರಣಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳಿಂದ ಮಾಹಿತಿ ಪಡೆದರು. 

ಈ ಭಾಗದ ಪ್ರದೇಶದಲ್ಲಿ ಭತ್ತ, ಮೆಣಸಿನ ಕಾಯಿ, ದಾಳಿಂಬೆ, ಅಂಜೂರ ಹಾಗೂ ಇತರೆ ತರಕಾರಿ ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಂಡ್ರಿಗಿ, ಹೊಸಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ತುಮಕೂರು ಮಾದರಿಯ ಫುಡ್ ಪಾಕರ್್ನ್ನು ಸ್ಥಾಪಿಸಿದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದಂತಾಗಲಿದೆ, ಅಲ್ಲದೆ ಜಿಲ್ಲೆ ತೋಟಗಾರಿಕೆ ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಲಿದೆ.  ಈ ಕುರಿತು ಸಮಗ್ರ ವರದಿಯೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಕೈಗಾರಿಕಾ ಇಲಾಖೆಯ ಉಪನಿದರ್ೇಶಕ ಮಂಜುನಾಥ ಗೌಡ ಅವರಿಗೆ ಸೂಚಿಸಿದರು.   

ಸಭೆಯಲ್ಲಿ ರೈಲ್ವೆ ಯೋಜನೆಗಳು ಸೇರಿದಂತೆ ಇತರೆ ಇಲಾಖೆಯ ಪ್ರಗತಿ ಮಾಹಿತಿಯನ್ನು ಪಡೆದರು. ಪೂವರ್ಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾದವರಿಗೆ ಶೋಕಾಸ್ ನೋಟೀಸ್ ನೀಡಲು ಕ್ರಮ ವಹಿಸುವಂತೆೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.  ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಮ್ ಪ್ರಸಾತ್ ಮನೋಹತ್, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಜಿ.ಪಂ. ಸಿಇಒ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

 

ಸುದ್ದಿ ಓದಿ