ಒಂದು ಹೆಲ್ಮೆಟ್ !ಒಂದು ಜೀವದ ಭದ್ರತೆ: ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ಮನೆ ಸೇರಿ :ಪಿ.ಎಸ್.ಐ ಕಠಿಣ ಎಚ್ಚರಿಕೆ
One helmet! One life safety: Wear a helmet, reach home safely: PSI stern warning
ಮುಂಡಗೋಡ 20: ಪಟ್ಟಣದಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪಿ.ಎಸ್.ಐ ಮಂಜುನಾಥ್ ಗೌಡರ್ ತಿಳಿಸಿದ್ದಾರೆ. ಪಟ್ಟಣದ ಅಮ್ಮಾಜಿ ಕೆರೆ ಸಮೀಪ ಪೊಲೀಸ್ ಇಲಾಖೆ ನಡೆಸಿದ ವಿಶೇಷ ತಪಾಸಣೆ ವೇಳೆ ಅನೇಕ ಸವಾರರು ಹೆಲ್ಮೆಟ್ ಇಲ್ಲದೆ ಸಂಚರಿಸುವುದು, ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಹಾಗೂ ಅಜಾಗರೂಕವಾಗಿ ಚಾಲನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ನಿರ್ಲಕ್ಷ್ಯವು ಕೇವಲ ದಂಡಕ್ಕೆ ಕಾರಣವಾಗುವುದಲ್ಲ; ಅಪಘಾತದ ಸಂದರ್ಭಗಳಲ್ಲಿ ಜೀವಹಾನಿಗೂ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಮೊಟಾರು ವಾಹನ ಕಾಯ್ದೆಯಡಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಹೆಲ್ಮೆಟ್ ಧರಿಸದವರು, ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಿದವರು ಹಾಗೂ ನಿಯಮ ಬಾಹಿರವಾಗಿ ವಾಹನ ಚಲಾಯಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. “ಹೆಲ್ಮೆಟ್ ಧರಿಸುವುದು ಕೇವಲ ಕಾನೂನು ಪಾಲನೆಗಾಗಿ ಅಲ್ಲ; ಅದು ನಿಮ್ಮ ಜೀವದ ರಕ್ಷಣೆಗೆ. ಯಾವುದೇ ಒತ್ತಡಕ್ಕೂ ಮಣಿಯದೇ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಪಿ.ಎಸ್.ಐ ಮಂಜುನಾಥ್ ಗೌಡರ್ ತಿಳಿಸಿದ್ದಾರೆ. ಸಂಚಾರ ನಿಯಮ ಪಾಲನೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಜೀವ ಅಮೂಲ್ಯ ಎಂಬ ಅರಿವಿನೊಂದಿಗೆ ಹೆಲ್ಮೆಟ್ ಧರಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು.ಮುಂದೆಯೂ ಇಂತಹ ತಪಾಸಣೆಗಳು ಮುಂದುವರಿಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 