ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ
ಗದಗ 18: ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ್ ಇವರ ಮಾರ್ಗದರ್ಶನದಲ್ಲಿ ಶುಕ್ರವಾರ ರೋಣ ತಾಲೂಕಾ ಆರೋಗ್ಯಧಿಕಾರಿಗಳು ಇವರ ನೇತ್ರೃತ್ವದಲ್ಲಿ ತಾಲೂಕಾ ತನಿಖಾ ದಳ ರೋಣ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಗದಗ ಇವರು ಜಂಟಿಯಾಗಿ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯ ವಿರುದ್ಧ ಕಾರ್ಯಾಚರಣೆ ಹಮ್ಮಿಕೊಂಡು ತಂಬಾಕು ನಿಯಂತ್ರಣಕಾಯ್ದೆ ಕೋಟ್ಪಾ-2003 ರ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಎಚ್ಚರಿಕೆ ನೀಡಿ ಒಟ್ಟು 30 ಪ್ರಕರಣ ದಾಖಲಿಸಿ ರೂ. 2950/- ದಂಡ ಸಂಗ್ರಹಿಸಲಾಯಿತು.
ಕೋಟ್ಪಾ ಕಾಯ್ದೆ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಆ ಸ್ಥಳದ ಮಾಲೀಕರ ಜವಾಬ್ದಾರಿಯಾಗಿರುತ್ತದೆ ಹಾಗೂ ಕೆಲವು ಅಂಗಡಿಗಳ ಹಿಂದೆ ಧೂಮಪಾನ ಅನಧಿಕೃತ ಅಡ್ಡಾಗಳನ್ನು ಮಾಡಿಕೊಂಡಿರುವವರ ವಿರುದ್ಧ ಕೂಡಾ ಕ್ರಮ ವಹಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದರಿಂದ ಸಾರ್ವಜನಿಕರೊಂದಿಗೆ ಆ ಸ್ಥಳದ ಮಾಲೀಕ ಕೆಲಸಗಾರರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವದು ಕಂಡುಬಂದಿದೆ, ತಂಬಾಕು ಉತ್ಪನ್ನಗಳ ಕಾಣುವಂತೆ ಪ್ರದರ್ಶಿಸುವುದು, ಅವುಗಳ ಕುರಿತು ಜಾಹಿರಾತು ನಿಷೇಧ, 18 ವರ್ಷದೊಳಗಿನವರಿಗೆ ತಂಬಾಕು ನಿಷೇಧ ಈ ಕುರಿತು ನಾಮಫಲಕ ಬಿತ್ತರಿಸುವದು ,ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ 85ಅ ರಷ್ಟು ಆರೋಗ್ಯ ಎಚ್ಚರಿಕೆ ಚಿನ್ಹೆ ಕಡ್ಡಾಯ, ಶಾಲಾ ಕಾಲೇಜು ಸುತ್ತ 100 ಗಜದವರೆಗೆ ತಂಬಾಕು ನಿಷೇಧ ಎಲ್ಲಾ ಶಾಲಾ/ಕಾಲೇಜುಗಳ ತಂಬಾಕು ಮುಕ್ತವನ್ನಾಗಿಸುವ ನಿಟ್ಟಿನಲ್ಲಿ 100 ಗಜದೊಳಗಿನ ತಂಬಾಕು ಮಾರಾಟ ಬಳಕೆ ಸಂಪೂರ್ಣ ನಿಷೇಧಗೊಳಿಸಲಾಗಿದ್ದು ಮುಂದಿನ ದಿನಗಳಲ್ಲಿ ಅಂತಹ ಪ್ರಕರಣ ಕಂಡುಬಂದಲಿ ್ಲಕಠಿಣ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಕೋಟ್ಪಾ ಕಾಯ್ದೆಯನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ.
ಈ ಸಂದರ್ಬದಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ಕೆ.ಎ. ಹಾದಿಮನಿ, ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿಗಳು ರೋಣ, ಶ್ರಿಮತಿ ಬಸಮ್ಮ ಚಿತ್ತರಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಾಮಾಜಿಕ ಕಾರ್ಯಕರ್ತೆ, ಬಿ.ಆರ್.ಪಾಟೀಲ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಎಮ್.ಎಸ್ ದೊಡ್ಡಮನಿ ಹಾಜರಿದ್ದರು.