ಸೀಲ್ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಆಥರ್ಿಕ ಚಟುವಟಿಕೆಗಳಿಗೆ ಅವಕಾಶ

ಧಾರವಾಡ 09: ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್ ಡೌನ್ ನಿಂದ ಹುಬ್ಬಳ್ಳಿ ಶಹರ ಹೊರತುಪಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಆಥರ್ಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಬರುವ ಸೋಮವಾರ ಮೇ.11 ರಿಂದ ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ವಾಣಿಜ್ಯ, ವಹಿವಾಟುಗಳನ್ನು ನಡೆಸಲು ಅವಕಾಶ ಕಲ್ಪಿಸಲು  ಆದೇಶ ಹೊರಡಿಸಲಾಗುವುದು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕೊರೊನಾ ನಿಯಂತ್ರಣ ಮತ್ತು ಲಾಕ್ ಡೌನ್ ಸಡಿಲಿಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂಗಡಿ ಮತ್ತು ಮುಂಗಟ್ಟುಗಳ ಕಾಯ್ದೆ (ಖಠಠಿ ಚಿಟಿಜ ಇಣಚಿಛಟಟಜಟಿಣ ಂಛಿಣ) ಪ್ರಕಾರ ಸ್ಥಾಪನೆಯಾಗಿರುವ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯ ವಾಣಿಜ್ಯ, ವಹಿವಾಟುಗಳು ಈಗಾಗಲೇ ಜಿಲ್ಲೆಯ ಧಾರವಾಡ, ಕಲಘಟಗಿ, ಅಳ್ನಾವರ, ಕುಂದಗೋಳ, ಅಣ್ಣಿಗೇರಿ ಹಾಗೂ ನವಲಗುಂದ ತಾಲ್ಲೂಕುಗಳಲ್ಲಿ ಪುನರಾರಂಭವಾಗಿವೆ.ಬರುವ ಸೋಮವಾರ ಮೇ 11 ರಿಂದ ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದ ಎಲ್ಲಾ ಕಡೆಗಳಲ್ಲೂ  ಕಿರಾಣಿ ಅಂಗಡಿ, ಹೊಟೆಲ್ಗಳಲ್ಲಿ ಪಾಸರ್ೆಲ್ ಸೇರಿದಂತೆ  ವಿವಿಧ ವ್ಯಾಪಾರ ಚಟುವಟಿಕೆಗಳ ಪ್ರಾರಂಭಕ್ಕೆ ವಾರದ ಎಲ್ಲಾ ದಿನಗಳಲ್ಲಿಯೂ ಅವಕಾಶ ಕಲ್ಪಿಸಿ ಸಮರ್ಪಕ ಆದೇಶ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಲಾಕ್ ಡೌನ್ ಸಡಿಲಿಕೆಯ ಈ ಅವಕಾಶವನ್ನು ಜಿಲ್ಲೆಯ ಜನತೆ ಎಚ್ಚರಿಕೆಯಿಂದ ಬಳಸಿಕೊಳ್ಳಬೇಕು .ದೇಶದ ಹಿತಕ್ಕಾಗಿ ಪ್ರಧಾನಮಂತ್ರಿಗಳು 41 ದಿನಗಳ ಲಾಕ್ ಡೌನ್ ಜಾರಿಗೊಳಿಸಿದ್ದಾರೆ,  ಕೊರೊನಾ ನಿಯಂತ್ರಣ ಜೊತೆಗೆ ದೇಶದ ಭವಿಷ್ಯ, ಆಥರ್ಿಕ ಸಮತೋಲನ ಕಾಪಾಡಿಕೊಳ್ಳುವ ಹೊಣೆಗಾರಿಕೆಯೂ ಇರುವುದರಿಂದ ಕೇಂದ್ರ ಸಕರ್ಾರದ ಮಾರ್ಗದರ್ಶನದಂತೆ ಲಾಕ್ಡೌನ್ ನಿಂದ ಕೆಲವು ಆಥರ್ಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗುತ್ತಿದೆ.ಈ ವಿನಾಯಿತಿಯನ್ನು ಜನತೆ ಮನಬಂದಂತೆ ಬಳಸಬಾರದು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಅನಗತ್ಯ ತಿರುಗಾಟಕ್ಕೆ ಸ್ವಯಂ ನಿಬರ್ಂಧ ಹಾಕಿಕೊಳ್ಳಬೇಕು. ಮಾಸ್ಕ್ ಧರಿಸದೇ ಇದ್ದರೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸುವ ಕಾರ್ಯ ಚುರುಕುಗೊಳಿಸಬೇಕು. ಜನತೆ ಸಹಕರಿಸಿದರೆ ಕೊರೊನಾ ನಿಯಂತ್ರಣ ಸುಲಭ ಸಾಧ್ಯವಾಗುತ್ತದೆ ಎಂದರು.

ದೇಶದಲ್ಲೆಡೆ ಇರುವಂತೆ ಇಲ್ಲಿಯೂ ಮಾಲ್, ಮಾರುಕಟ್ಟೆ ಸಂಕೀರ್ಣಗಳು, ಬಾರ್, ರೆಸ್ಟೊರೆಂಟ್, ಜಿಮ್, ಧಾಮರ್ಿಕ ಚಟುವಟಿಕೆಗಳು, ಸಭೆ, ಸಮಾರಂಭಗಳ ಮೇಲಿನ ನಿಬರ್ಂಧ ಮುಂದುವರೆಯಲಿದೆ. ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಎಲ್ಲಾ ಖಾಸಗಿ ಮತ್ತು ಸಕರ್ಾರಿ ಕಟ್ಟಡ ನಿಮರ್ಾಣ ಕಾಮಗಾರಿಗಳನ್ನೂ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುವುದು. ಶೇ.25 ರಷ್ಟು ಕೈಗಾರಿಕಾ ಚಟುವಟಿಕೆಗಳು ಪುನರಾರಂಭವಾಗಿವೆ. ಸಂಜೆ 7 ಗಂಟೆ ನಂತರ  ಬೆಳಗಿನ 7 ಗಂಟೆಯವರೆಗೆ ಲಾಕ್ ಡೌನ್ ನಿಬರ್ಂಧ ಜಾರಿಯಾಗುವುದರಿಂದ ಈ ಅವಧಿಯಲ್ಲಿ ಕೈಗಾರಿಕೆಗಳು ರಾತ್ರಿ ಪಾಳಿಯ ಕಾಮರ್ಿಕರ ವಿಶ್ರಾಂತಿಗೆ ತಮ್ಮ ಆವರಣದಲ್ಲಿಯೇ ಅವಕಾಶ ಕಲ್ಪಿಸಿ ಉತ್ಪಾದನೆ ಚಟುವಟಿಕೆಗಳನ್ನು ಮುಂದುವರೆಸಲು ಅವಕಾಶ ನೀಡಲಾಗುವುದು. ವಿವಿಧ ಬಡಾವಣೆಗಳಿಗೆ ತರಕಾರಿ ಪೂರೈಕೆ ಮುಂದುವರೆಯಲಿ ಇದರಿಂದ ಜನಸಂದಣಿ ನಿಯಂತ್ರಣವಾಗುತ್ತದೆ ಎಂದರು. ಖಾಸಗಿ ಆಸ್ಪತ್ರೆಗಳು ಸಮರ್ಪಕವಾಗಿ ಸೇವೆ ನೀಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಎಸ್ ಡಿ ಎಂ ಸೇವೆ ಪ್ರಾರಂಭಿಸಿದೆ. ಈ ಕುರಿತು ಶ್ರೀಕ್ಷೇತ್ರ ಧರ್ಮಸ್ಥಳದ ಧಮರ್ಾಧಿಕಾರಿಗಳಾದ ವಿರೇಂದ್ರ ಹೆಗಡೆಯವರೊಂದಿಗೆ ಮಾತನಾಡಿದಾಗ ಅವರು ಸಕರ್ಾರದೊಂದಿಗೆ ಎಲ್ಲಾ ಸಹಕಾರ ನೀಡಲು ಎಸ್ ಡಿ ಎಂ ಆಸ್ಪತ್ರೆಗೆ ನಿದರ್ೇಶನ ನೀಡಿದ್ದಾರೆ ಎಂದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಹೊರರಾಜ್ಯಗಳಿಂದ ಬರುವ ಜನರಿಗೆ ಈಗ ಅವಕಾಶ ದೊರೆತಿದೆ ಎಲ್ಲರನ್ನೂ ಕೃಷಿ ವಿ.ವಿ.ಆವರಣದಲ್ಲಿ ತಪಾಸಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ್, ತಮಿಳುನಾಡು ಹಾಗೂ ದೆಹಲಿ ರಾಜ್ಯಗಳಿಂದ ಬರುವ ಎಲ್ಲರನ್ನೂ ಸಕರ್ಾರಿ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದರು.  ಕಿಮ್ಸ್ ನಿದರ್ೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಮಾತನಾಡಿ, ಸದ್ಯ ಕಿಮ್ಸ್ ಹೊರರೋಗಿ ವಿಭಾಗದಲ್ಲಿ 800, ಒಳರೋಗಿ  500 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ, ತುತರ್ು ಚಿಕಿತ್ಸಾ ಘಟಕದಲ್ಲಿಯೂ ರೋಗಿಗಳಿದ್ದಾರೆ. ಕೋವಿಡ್ ಪ್ರಯೋಗಾಲಯದಲ್ಲಿ ಪ್ರತಿನಿತ್ಯ ಸುಮಾರು 250 ಕ್ಕೂ ಹೆಚ್ಚು ವರದಿಗಳು ಸಿದ್ಧವಾಗುತ್ತಿವೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರಾಯೋಗಿಕ ಪ್ಲಾಸ್ಮಾ ಥೆರಪಿ ಕೈಗೊಳ್ಳಲು  ಐಸಿಎಂ ಆರ್ ನಿಂದ ಕಿಮ್ಸ್ ಗೆ ಅನುಮೋದನೆ ದೊರೆತಿದೆ ಎಂದರು.

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಶ್ರೀನಿವಾಸ ಮಾನೆ, ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವತರ್ಿಕಾ ಕಟಿಯಾರ್, ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಕಿಮ್ಸ್ ನ ಡಾ.ಲಕ್ಷ್ಮೀಕಾಂತ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ಮೋಹನ ಭರಮಕ್ಕನವರ ಮತ್ತಿತರರು ಇದ್ದರು.