ಸಮಾಜದ ಸಮಸ್ಯೆ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ
Organizations should step forward to resolve societal problems
ಲೋಕದರ್ಶನ ವರದಿ
ಬೆಳಗಾವಿ 17: ಸಂಘಟನೆಗಳು ಸಭೆ, ಸಮಾರಂಭ ಹಾಗೂ ಸನ್ಮಾನಗಳಿಗೆ ಮಾತ್ರ ಸೀಮಿತವಾಗದೆ, ಸಮಾಜದ ಜಟೀಲ್ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಎಂದು ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹೇಳಿದರು.
ಬೆಳಗಾವಿಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಟ್ರಸ್ಟ್‌ನ ಗೌರವಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಆಶೀರ್ವಚನ ನೀಡಿದ ಅವರು, ಸಂಘಟನೆಗಳಲ್ಲಿ ಸಮಾಜದ ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕು. ನಕಾರಾತ್ಮಕ ವಿಚಾರಗಳನ್ನು ಬದಿಗಿಟ್ಟು ಸಕಾರಾತ್ಮಕವಾಗಿ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಸಾಮಾಜಿಕ ಜಾಲತಾಣಗಳು ವೇಗವಾಗಿ ಬೆಳೆಯುತ್ತಿದ್ದು, ಲಕ್ಷಾಂತರ ಹಿಂಬಾಲಕರನ್ನು ಹೊಂದಿವೆ. ಈ ಬೆಳವಣಿಗೆಯನ್ನು ಮಾಧ್ಯಮ ಕ್ಷೇತ್ರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಮುದ್ರಣ ಮಾಧ್ಯಮವೂ ಕಾಲಕ್ಕೆ ತಕ್ಕಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಭೆಯನ್ನು ಉದ್ಘಾಟಿಸಿದ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸುರೇಶ್ ಶಾನುಭೋಗ ಮಾತನಾಡಿ, ಪತ್ರಿಕಾರಂಗ ಡೋಲಾಯಮಾನ ಸ್ಥಿತಿಯಲ್ಲಿರುವ ಈ ಸಂದರ್ಭದಲ್ಲಿ ಪತ್ರಕರ್ತರು ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಹಿರಿಯ ಪತ್ರಕರ್ತ ಎಲ್.ಎಸ್. ಶಾಸ್ತ್ರಿ, ಕನ್ನಡಪ್ರಭ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಬ್ರಹ್ಮಾನಂದ ಹಡಗಲಿ, ಇಂಡಿಯನ್ ಎಕ್ಸ್‌ಪ್ರೆಸ್ ಅಸೋಸಿಯೇಟೆಡ್ ಎಡಿಟರ್ ನೌಶಾದ ಬಿಜಾಪೂರೆ ಹಾಗೂ ಟ್ರಸ್ಟ್ ಕಾನೂನು ಸಲಹೆಗಾರ ಬಸವರಾಜ ರೊಟ್ಟಿ ಮಾತನಾಡಿದರು.
ಟ್ರಸ್ಟ್ ಅಧ್ಯಕ್ಷ ಮುರುಗೇಶ ಶಿವಪೂಜಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗದಗದ ಶಂಕರ್ ಕುದುರಿಮೋತಿ ಅವರನ್ನು ಟ್ರಸ್ಟ್‌ನ ಹತ್ತನೇ ಟ್ರಸ್ಟಿಯಾಗಿ ನೇಮಕ ಮಾಡಲಾಯಿತು. ಮಂಗಳೂರಿನ ಸುದೇಶ್ ಕುಮಾರ್ ಅವರನ್ನು ನೂತನ ಕಾರ್ಯದರ್ಶಿಯಾಗಿ ಹಾಗೂ ಅಂಕೋಲಾದ ಮಂಜುನಾಥ ನಾಯಕ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಟ್ರಸ್ಟೀ ಡಾ. ರಾಜೇಂದ್ರ ಪವಾರ್ ಸ್ವಾಗತಿಸಿದರು. ಸಂಪಾದಕರ ಸಂಘದ ಉಪಾಧ್ಯಕ್ಷ ಹೀರೋಜಿ ಮಾವರ್ಕರ್, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಮುಚ್ಚಳಂಬಿ, ಲೋಕದರ್ಶನದ ಸಹಾಯಕ ಸಂಪಾದಕಿ ಜಯಲಕ್ಷ್ಮಿ ದೇಸಾಯಿ, ಸಂಘದ ರಾಜ್ಯ ಕಾರ್ಯದರ್ಶಿ ಆರ್. ಶರಣಪ್ಪ ಗುಮಗೇರಾ ಸೇರಿದಂತೆ ಟ್ರಸ್ಟಿಗಳಾದ ಎ.ಬಿ. ಧಾರವಾಡಕರ್, ವಸಂತ ಹೊಸಮನಿ, ಬಸವರಾಜ ಪುಟ್ಟಿ ಹಾಗೂ ಕಲಬುರಗಿಯ ಆನಂದ ಮಣ್ಣೂರ್ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 