ಕ್ರೀಡಾ ಸಾಧನೆ ಮೆರೆದ ಪಿಎ ಜೆಎಸ್ ಎಸ್ ಕಾಲೇಜು ವಿದ್ಯಾರ್ಥಿಗಳು
PA JSS College students excel in sports
ರಾಣೇಬೆನ್ನೂರು 11: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಅಂತರ್ ಮಹಾವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಸಾಧನೆ ಮೆರೆದ ಸ್ಥಳೀಯ ಪಿಎ ಜೆಎಸ್‌ಎಸ್ ಮಹಿಳಾಮಹಾ ವಿದ್ಯಾಲಯದ ವಿದ್ಯಾರ್ಥಿಗಳಾದ ಅರ್ಚನಾ ಕೊಣತಲಿ ಹಾಗೂ ಸಂಜನಾ ಕನ್ನಮ್ಮನವರ ಇವರುಗಳು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ. ಕಾಲೇಜಿನ ಈ ಸಾಧಕ ವಿದ್ಯಾರ್ಥಿಗಳು ತಮಿಳುನಾಡಿನ ಅಣ್ಣ ಯೂನಿವರ್ಸಿಟಿಯಲ್ಲಿ ನಡೆಯಲಿರುವ ದಕ್ಷಿಣ ಮಧ್ಯ ವಲಯದ ಅಂತರ ವಿಶ್ವವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಕ್ರೀಡಾ ವಿಭಾಗದ ಸಂಚಾಲಕ ಡಾ. ಸುನಿಲ್ ಹಿರೇಮನಿ ಅವರು ಮಾರ್ಗ ದರ್ಶನ ನೀಡಿದ್ದರು. ಸಾಧಕ ವಿದ್ಯಾರ್ಥಿಗಳಿಗೆ, ಕಾಲೇಜು ಆಡಳಿತಾಧಿಕಾರಿ ಡಾ. ಆರ್. ಎಂ. ಕುಬೇರ್ಪ, ಚೇರ್ಮನ್ ರುದ್ರ್ಪ ಲಮಾಣಿ, ಮತ್ತು ಕಾಲೇಜಿನ ಉಪನ್ಯಾಸಕರು ದೈಹಿಕ ಶಿಕ್ಷಕರು, ಪ್ರಾಧ್ಯಾಪಕರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 