ಕೋವಿಡ್ : ಪ್ರಖ್ಯಾತ ಒಡಿಯಾ ಗಾಯಕ, ಸಂಗೀತ ನಿರ್ದೇಶಕ ಶಾಂತಿರಾಜ್ ನಿಧನ
ಭುವನೇಶ್ವರ, ಮೇ 27:ಖ್ಯಾತ ಒಡಿಯಾ ಚಲನಚಿತ್ರ ಗಾಯಕ, ಸಂಗೀತ ಸಂಯೋಜಕ ಮತ್ತು ಸಂಗೀತ ನಿರ್ದೇಶಕ ಶಾಂತಿರಾಜ್ ಖೋಸ್ಲಾ ಅವರು ಕೋವಿಡ್ ಸೋಂಕಿನಿಂದಾಗಿ ಗುರುವಾರ ನಿಧನರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಕಟಕ್ನ ಆಸ್ಪತ್ರೆಯಲ್ಲಿ ಮೃತರಾದ ಅವರು, ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ. ಮೇ 19 ರಂದು ಕೋವಿಡ್ ಸೋಂಕು ದೃಢಪಟ್ಟ ನಂತರ ಅವರು ಮನೆಯಲ್ಲಿಯೆ ಪ್ರತ್ಯೇಕವಾಗಿದ್ದರು. ಆದರೆ, ಆರೋಗ್ಯದಲ್ಲಿ ಏರುಪೇರಾದ ಕಾರಣ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಶಾಂತಿರಾಜ್ ಅವರಿಗೆ 2019 ರಲ್ಲಿ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.