ಕಾರವಾರ

ರೈತರಿಂದ ಭತ್ತ ಖರೀದಿ ; ನೋಂದಣಿಗೆ ಡಿ.31 ರವರೆಗೆ ಅವಧಿ ವಿಸ್ತರಣೆ

ರೈತರಿಂದ ಭತ್ತ ಖರೀದಿ ; ನೋಂದಣಿಗೆ ಡಿ.31 ರವರೆಗೆ ಅವಧಿ ವಿಸ್ತರಣೆ

  

ಕಾರವಾರ 27: ಪ್ರಸಕ್ತ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತವನ್ನು ಖರೀದಿಸುವ ಬಗ್ಗೆ ಸರ್ಕಾರದ ಆದೇಶದಂತೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತವನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಆದೇಶದಂತೆ ಭತ್ತ ಖರೀದಿ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.   

ಭತ್ತ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ರವರಿಂದ ಪ್ರತೀ ತಾಲೂಕಿನಲ್ಲಿ ಅಗತ್ಯತೆಗೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ನೋಂದಾಯಿಸಿಕೊಂಡ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್ ನಂತೆ ಗರಿಷ್ಟ 50 ಕ್ವಿಂಟಲ್ ಭತ್ತವನ್ನು ಒಬ್ಬ ರೈತರಿಂದ ಖರೀದಿಸಲಾಗುವುದು. ಕಾರಣ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಲುವಂತೆ ತಿಳಿಸಲಾಗಿದೆ.  

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ ಕಾರವಾರ ರವರ ಕಚೇರಿಗೆ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 08382-226243 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ