ಅಥಣಿ ತಾಲೂಕಾ ಪಂಚಾಯತ್ ಅಧ್ಯಕ್ಷರಾಗಿ ನಾಯಿಕ, ಉಪಾಧ್ಯಕ್ಷರಾಗಿ ಪಾಟೀಲ ಅವಿರೋಧ ಆಯ್ಕೆ
ಚುನಾವಣೆ ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರೊಂದಿಗೆ ತಾಲೂಕಾ ಸದಸ್ಯರು ಹಾಗೂ ಮುಖಂಡರು ವಿಜಯೋತ್ಸವ ಆ
ಅಥಣಿ 22: ಅಥಣಿ ತಾಲೂಕಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಶುಕ್ರವಾರ ನಡೆದಿದ್ದು ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯನ್ನು ಮತ್ತೆ ಬಿಜೆಪಿ ಹಂಚಿಕೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಕವಿತಾ ನಾಯಿಕ ಹಾಗೂ ಉಪಾಧ್ಯಕ್ಷರಾಗಿ ಜ್ಯೋತಿ ಪಾಟೀಲ ಅವರು ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾಗಿ ಆಗಮಿಸಿದ ಉಪವಿಭಾಗಾಧಿಕಾರಿ ರವಿಂದ್ರ ಕರಿಲಿಂಗನಗೌಡ ಘೋಷಣೆ ಮಾಡಿದರು .
43 ಅಥಣಿ ತಾಲೂಕ ಪಂಚಾಯತ ಸದಸ್ಯರಲ್ಲಿ 32 ಸದಸ್ಯರು ಚುನಾವಣೆಗೆ ಹಾಜರಾಗಿದ್ದು ಅದರಲ್ಲಿ 11 ಗಂಟೆಗೆ ಅಧ್ಯಕ್ಷ ಸ್ಥಾನಕ್ಕೆ ಕವಿತಾ ನಾಯಿಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಪಾಟೀಲ ನಾಮಪತ್ರ ಸಲ್ಲಿಸಿದ್ದರು. ಅದರಂತೆ ಇವರ ವಿರುದ್ಧ ಯಾವುದೆ ಸದಸ್ಯರು ನಾಮಪತ್ರ ಸಲ್ಲಿಸದಿರುವುದರಿಂದ 1 ಗಂಟೆಗೆ ಚುನಾವಣಾಧಿಕಾರಿ ರವಿಂದ್ರ ಕರಿಲಿಂಗನಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ಕವಿತಾ ನಾಯಿಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಪಾಟೀಲ ಅವಿರೋಧ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ಕವಿತಾ ನಾಯಿಕ ಮಾತನಾಡಿ ತಾಲೂಕಿನಲ್ಲಿ ಬರಗಾಲವಿರುವುದರಿಂದ ನಾವು ಎಲ್ಲಾ ಮಾಹಿತಿ ಪಡೆದು ನೀರಿನ ಸೌಕಯ್ರ್ಯ ಮಾಡುತ್ತೇವೆ. ಅಬಿವೃದ್ಧಿಗೆ ಮಾಜಿ ಶಾಸಕ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಅವರ ಸಲಹೆ ಪಡೆದು ಯಾವುದೆ ಗ್ರಾಮ ಪಂಚಾಯತಿಯಲ್ಲಿ ಮೇವಿನ ಹಾಗೂ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.
ಜಿ.ಪಂ ಸದಸ್ಯರಾದ ಸಿದ್ದಪ್ಪಾ ಮುದಕನ್ನವರ, ಬಿಜೆಪಿ ಮುಖಂಡರಾದ ಶ್ರೀಶೈಲ ನಾಯಿಕ, ಶಿವಾನಂದ ನಾಯಿಕ, ವಿಜಯ ಮಂಗಸೂಳಿ, ಅರುಣ ಬಾಸಿಂಗೆ, ಮಲ್ಲೇಶ ಹುದ್ದಾರ ಮುಂತಾದವರು ಭಾಗಿಯಾಗಿದ್ದರು.
ಚುನಾವಣೆ ನಂತರ ಮಾಜಿ ತಾಲೂಕಾ ಅಧ್ಯಕ್ಷ ಶಕುಂತಲಾ ರುದ್ರಗೌಡ, ಮಾಜಿ ತಾಲೂಕಾ ಪಂಚಾಯತ ಉಪಾಧ್ಯಕ್ಷರಾದ ಸುಜಾತ ಅವರವಾಡ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಕವಿತಾ ನಾಯಿಕ ಹಾಗೂ ಉಪಾಧ್ಯಕ್ಷೆ ಜ್ಯೋತಿ ಪಾಟೀಲ ಅವರನ್ನು ಸನ್ಮಾನಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 