ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
Petition for tracing the heirs of an anonymous deceased person
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ 31: ನಗರದ ವಡ್ಡರಬಂಡಿ ರಸ್ತೆಯ ರಾಧಿಕಾ ಲಾಡ್ಜ್‌ನ ಮುಂಭಾಗ ಸುಮಾರು 40-45 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥರಾಗಿ, ಯಾವುದೋ ಖಾಯಿಲೆಯಿಂದ ಜ.31 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5.5 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಅಗಲವಾದ ಮುಖ, ತಲೆಯ ಮೇಲೆ ಕಪ್ಪು ಕೂದಲು ಹಾಗೂ ಮುಖದಲ್ಲಿ ಕಪ್ಪು ಮೀಸೆ ಹೊಂದಿರುತ್ತಾರೆ. ಕಪ್ಪು ಮತ್ತು ಕೆಂಪು ಮಿಶ್ರಿತ ಟೀ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸುತ್ತಾರೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 