ಪಾನ್ ಶಾಫ್ ಅಂಗಡಿಗಳ ಮೇಲೆ ಪೊಲೀಸ್ ಇಲಾಖೆ ದಂಡ
Police department fines pawn shops
ಜಮಖಂಡಿ : 30-1 ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮತ್ತು ಹುನ್ನೂರು ಗ್ರಾಮದಲ್ಲಿ ಪಾನ್ ಶಾಫ್ ಅಂಗಡಿಗಳ ಮೇಲೆ ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕೋಟ್ಪಾ ಕಾಯ್ದೆ ಅಡಿಯಲ್ಲಿ ದಾಳಿಯನ್ನು ನಡೆಸಿ ದಂಡವನ್ನು ವಿಧಿಸಿದ್ದಾರೆ.
ನಗರದ ಅಂಬೇಡ್ಕರ್ ಸರ್ಕಲ್ ಸುತ್ತು-ಮುತ್ತಲಿನ ಪಾನ್ ಶಾಫ್‌ಗಳಿಗೆ ಹಾಗೂ ಹುನ್ನೂರ ಗ್ರಾಮದಲ್ಲಿನ ಪಾನ್ ಶಾಫ್‌ಗಳ ಮೇಲೆ ದಾಳಿ ಮಾಡದ ಸಮಯದಲ್ಲಿ 27 ಮಾವ ಪ್ಯಾಕೆಟ್‌ಗಳು ಸಿಕ್ಕಿದ್ದು. ಕೋಟ್ಪಾ ಕಾಯ್ದೆ ಅಡಿಯಲ್ಲಿ ಒಟ್ಟು ಬೇರೆ-ಬೇರೆ 7 ಪ್ರಕರಣಗಳನ್ನು ದಾಖಲಿಸಿಕೊಂಡು ರೂ, 3,600 ದಂಡವನ್ನು ವಿಧಿಸಿದ್ದಾರೆ.
ಇದೇ ಸಂದರ್ಭದಲ್ಲಿ ತಾಲೂಕ ಆರೋಗ್ಯ ಅಧಿಕಾರಿ ಗೈಬುಸಾಬ ಗಲಗಲಿ, ಆರೋಗ್ಯ ನೀರೀಕ್ಷಣಾಧಿಕಾರಿ ಸಂತೋಷ ನಾಯಿಕ, ಅಸ್ಲಂ ಅಬಾಲೆ, ಕಂದಾಯ ಇಲಾಖೆಯ ಆಹಾರ ನೀರೀಕ್ಷಕ ಮಂಜುನಾಥ ದೊಡಮನಿ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 