ಕಲುಷಿತ ನೀರು: ಅಲ್ಲಿ ಜನ ಸತ್ತರೆ ಇಲ್ಲಿಪ್ರಾಣಬಿಟ್ಟ ಪಾಪದ ಗಿಳಿಗಳು
Polluted water: If people die there, then the sinful parrots die here
ಖಾರ್ಗೋನ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ಕಲುಷಿತ ಆಹಾರ ಸೇವಿಸಿ ಕನಿಷ್ಠ 200 ಗಿಳಿಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ಇಂದು (ಶುಕ್ರವಾರ) ತಿಳಿಸಿದ್ದಾರೆ.
ಬಢ್ವಾಹ್ ಪ್ರದೇಶದ ನದಿ ದಂಡೆಯಲ್ಲಿರುವ ಜಲಚರ ಸೇತುವೆಯ ಬಳಿ ಈ ಮನಕಲಕುವ ಘಟನೆ ವರದಿಯಾಗಿದೆ. ಇಂದೋರ್ನಲ್ಲಿ ಕಲುಷಿತ ನೀರಿನ ಸೇವನೆಯಿಂದ 10 ಮಂದಿ ಮೃತಪಟ್ಟಿದ್ದು, 150ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ನಡುವೆ ಗಿಳಿಗಳ ಮಾರಣ ಹೋಮದ ಬಗ್ಗೆ ವರದಿಯಾಗಿದೆ.
ಗಿಳಿಗಳ ಸರಣಿ ಸಾವಿನಿಂದಾಗಿ ಹಕ್ಕಿ ಜ್ವರ ಹರಡಿರಬಹುದೇ ಎಂಬ ಅನುಮಾನ ಮೂಡಿತ್ತು. ಆದರೆ ಮರಣೋತ್ತರ ವೈದ್ಯಕೀಯ ಪರೀಕ್ಷೆಯಲ್ಲಿ ಹಕ್ಕಿ ಜ್ವರದಿಂದ ಮೃತಪಟ್ಟಿಲ್ಲ ಎಂದು ಪಶುವೈದ್ಯಕೀಯ ವೈದ್ಯರು ದೃಢೀಕರಿಸಿದ್ದಾರೆ. ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಕಲುಷಿತ ಹಾಗೂ ಅಸಮರ್ಪಕವಾದ ಆಹಾರ ಸೇವನೆಯಿಂದ ಸಾವು ಸಂಭವಿಸಿದೆ ಎಂದು ಹೇಳಿದ್ದಾರೆ.
ಕೀಟನಾಶಕ ಸಿಂಪಡಿಸಿದ ಆಹಾರ ಸೇವನೆಯಿಂದ ಸಾವು ಸಂಭವಿಸಿರಬಹುದು ಎಂದೂ ವೈದ್ಯರು ತಿಳಿಸಿದ್ದಾರೆ.ಗಿಳಿಗಳಲ್ಲಿ ಸೋಂಕಿನ ಯಾವುದೇ ಲಕ್ಷಣ ಕಂಡುಬಂದಿಲ್ಲ. ಹೆಚ್ಚಿನ ಪರೀಕ್ಷೆಗಾಗಿ ಜಬಲ್ಪುರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯ ಬೆನ್ನಲ್ಲೇ ಗಿಳಿಗಳಿಗೆ ಸಾರ್ವಜನಿಕರು ಆಹಾರ ನೀಡುವುದನ್ನು ನಿರ್ಬಂಧಿಸಲಾಗಿದ್ದು, ಕಟ್ಟುನಿಟ್ಟಾಗಿ ಜಾರಿ ಮಾಡಲು ಸಿಬ್ಬಂದಿ ನಿಯೋಜಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 