ಕೋವಿಡ್ ಲಸಿಕೆ ಸಂಗ್ರಹ, ಚಿಕಿತ್ಸೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
ಬಳ್ಳಾರಿ 18: ಕೊರೊನಾ ಮಹಾಮಾರಿಗೆ ಕಡಿವಾಣ ಹಾಕುವ ಕೋವಿಡ್ ವ್ಯಾಕ್ಸಿನೇಶನ್ ಶೀಘ್ರದಲ್ಲಿಯೇ ದೇಶದಲ್ಲಿ ಲಭ್ಯವಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಲಸಿಕೆಯನ್ನು ಸಮರ್ಪಕವಾಗಿ ಕೋಲ್ಡ್ ಸ್ಟೋರೆಜ್ನಲ್ಲಿ ಸಂಗ್ರಹ,ವಿತರಣೆ ಮತ್ತು ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಟಾಸ್ಕ್ಫೋಸರ್್ ಸಮಿತಿ ಸಭೆ ಜರುಗಿತು.
ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಭ್ಯವಾದ ತಕ್ಷಣ ಪ್ರಥಮ ಹಂತವಾಗಿ ಸರಕಾರಿ ಮತ್ತು ಖಾಸಗಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದ್ದು,ಅದರಂತೆ ಜಿಲ್ಲೆಯಲ್ಲಿ 17682 ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ಸರಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ 13680 ಮತ್ತು ಖಾಸಗಿ ವೈದ್ಯಕೀಯ ಸಿಬ್ಬಂದಿ 4002 ನೋಂದಾಯಿಸಲಾಗಿದ್ದು,ಇನ್ನೂ 281 ಜನ ವೈದ್ಯಕೀಯ ಸಿಬ್ಬಂದಿಯ ತತ್ಕ್ಷಣ ನೋಂದಣಿಗೆ ಕ್ರಮಕೈಗೊಳ್ಳಿ;ಕೋವಿಡ್ ವ್ಯಾಕ್ಸಿನ್ ನೀಡುವ ಸಂದರ್ಭದಲ್ಲಿ ನಮ್ಮ ಹೆಸರಿಲ್ಲ;ಉದ್ದೇಶಪೂರ್ವಕವಾಗಿ ಕೈಬಿಟ್ಟಿದ್ದಾರೆ ಎಂಬ ಆರೋಪಗಳಿಗೆ ಅಸ್ಪದ ನೀಡಬೇಡಿ ಎಂದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಅನಿಲಕುಮಾರ್ ಅವರು ಮಾತನಾಡಿ, ಕೋವಿಡ್ ಲಸಿಕೆ ಇದೇ ಡಿಸೆಂಬರ್ 25ರಂದು ಘೋಷಣೆಯಾಗುವ ಸಾಧ್ಯತೆ ಇದ್ದು, ಲಸಿಕೆಯನ್ನು ಸಮರ್ಪಕವಾಗಿ ಸಂಗ್ರಹಿಸುವುದಕ್ಕೆ ಕೋಲ್ಡ್ ಸ್ಟೋರೆಜ್ ವ್ಯವಸ್ಥೆ ಹಾಗೂ ಲಸಿಕೆ ಸಮರ್ಪಕವಾಗಿ ವಿತರಣೆಗೆ ಮತ್ತು ಚಿಕಿತ್ಸೆ ನೀಡುವುದಕ್ಕೂ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು,ಲಸಿಕೆ ಬಂದ ತಕ್ಷಣ ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿಗಳಿಗೆ 10 ದಿನದೊಳಗೆ ಲಸಿಕೆ ನೀಡಲಾಗುವುದು ಎಂದರು.
2ನೇ ಹಂತದಲ್ಲಿ ಪೋಲಿಸ್ ಸಿಬ್ಬಂದಿ,ಗೃಹರಕ್ಷಕದಳ, ನಗರ ಸ್ಥಳೀಯ ಸಂಸ್ಥೆಗಳ ಕಾಮರ್ಿಕರು ಹಾಗೂ ಫ್ರಂಟ್ಲೈನ್ ಕೋವಿಡ್ ವಾರಿಯರ್ಸ್ಗಳಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ. 3ನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಹಾಗೂ 50 ವರ್ಷದೊಳಗೆ ಕೋಮೊಬರ್ಿಡಿಟಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.
*ಜ.17ರಿಂದ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿ:
ಜಿಲ್ಲೆಯಲ್ಲಿ ಬರುವ 2021 ಜ.17ರಂದು ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು,0ದಿಂದ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಹಾಗೂ ಯಾವುದೇ ಕಾರಣಕ್ಕೂ ಮಕ್ಕಳು ಇದರಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಮತ್ತು ಇದಕ್ಕೆ ಎಲ್ಲ ಸಿದ್ಧತೆಗಳು ಮಾಡಿಕೊಳ್ಳಬೇಕು. ಇನ್ನೀತರ ಇಲಾಖೆಗಳು ಅಗತ್ಯ ಸಹಕಾರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೀಡಬೇಕು ಎಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದರು.
ತಾಲೂಕು ಪಂಚಾಯ್ತಿ ಕಾರ್ಯನಿವರ್ಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕುಮಟ್ಟದ ಪಲ್ಸ್ಪೋಲಿಯೋ ಕಾರ್ಯಕ್ರಮ ಅನುಷ್ಠಾನ ಸಮಿತಿ ರಚಿಸಬೇಕು ಮತ್ತು ಗ್ರಾಪಂ ಮೂಲಕ ಪ್ರತಿ ಗ್ರಾಪಂಗಳ ವ್ಯಾಪ್ತಿಯಲ್ಲಿ ಡಂಗೂರ ಬಾರಿಸುವ ಮೂಲಕ ಲಸಿಕಾ ದಿನ ಹಾಗೂ ಸ್ಥಳವನ್ನು ಪ್ರಚಾರ ಮಾಡಬೇಕು ಎಂದರು.
ಜಿಲ್ಲೆಯಲ್ಲಿ 326704 ಮಕ್ಕಳಿಗೆ ಲಸಿಕೆ ಹಾಕಿಸುವ ಗುರಿ ಹಾಕಿಕೊಳ್ಳಲಾಗಿದೆ. ಲಸಿಕೆಗಾಗಿ 1852 ಬೂತ್ಗಳನ್ನು ಗುರುತಿಸಲಾಗಿದೆ. 1535 ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವುದಕ್ಕಾಗಿ ತಂಡಗಳನ್ನು ರಚಿಸಲಾಗಿದೆ. 21 ಮೊಬೈಲ್ ತಂಡಗಳನ್ನು ರಚಿಸಲಾಗಿದೆ.
1978 ತಂಡಗಳನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. 3956 ಲಸಿಕೆ ಹಾಕುವವರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. 365 ಜನರು ಮೇಲ್ವಿಚಾರಕರು ಹಾಗೂ 9 ಜನ ನೋಡಲ್ ಅಧಿಕಾರಿಗಳನ್ನು ಈ ಕಾರ್ಯದ ಮೇಲ್ವಿಚಾರಣೆ ಜವಾಬ್ದಾರಿ ವಹಿಸಲಾಗಿದೆ. 207 ವಾಹನಗಳನ್ನು ಈ ಕಾರ್ಯಕ್ಕಾಗಿ ಬಳಸಲಾಗುತ್ತಿದೆ ಎಂದರು.
ನಗರ ಪ್ರದೇಶದಲ್ಲಿರುವ ಎಲ್ಲ ಖಾಸಗಿ ಹಾಗೂ ಕಾಪರ್ೋರೆಟ್ ಆಸ್ಪತ್ರೆಗಳು,ಕ್ಲಿನಿಕ್ಗಳು ಮತ್ತು ವೈದ್ಯಕೀಯ ಸಂಸ್ಥೆಗಳೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿ,ಲಸಿಕಾ ಬೂತ್ಗಳನ್ನು ತೆರೆದು ಪೋಲಿಯೋ ಲಸಿಕೆ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅವರು ಸೂಚಿಸಿದರು.
ವಿವಿಧ ಇಲಾಖೆಗಳ ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ,ಈ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಈಟ್ ರೈಟ್ ಇಂಡಿಯಾ(ಬಳ್ಳಾರಿ)ಗೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಅಧಿಕಾರಿಗಳೊಂದಿಗೆ ಚಚರ್ೆ ನಡೆಸಿದ ಜಿಲ್ಲಾಧಿಕಾರಿ ನಕುಲ್ ಅವರು ಅಗತ್ಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ವಿಮ್ಸ್ ನಿದರ್ೇಶಕ ಡಾ.ದೇವಾನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ್ ಸೇರಿದಂತೆ ವಿವಿಧಿ ಇಲಾಖೆಗಳ ಅಧಿಕಾರಿಗಳು ಇದ್ದರು.