ಅಂತರರಾಷ್ಟ್ರೀಯ

ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ಮೋದಿ,ಅಜಿತ್ ದೋವಲ್ ಕೈವಾಡ : ಕೆನಡಾ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ

ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ಮೋದಿ,ಅಜಿತ್ ದೋವಲ್ ಕೈವಾಡ : ಕೆನಡಾ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ

ಕೆನಡಾ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ ಇದೆ ಎಂಬ ವರದಿಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಕೆನಡಾ ಸರ್ಕಾರ ಕೂಡ ವರದಿಯನ್ನು ನಿರಾಕರಿಸಿದೆ,

ಇತ್ತೀಚೆಗೆ ಪ್ರಕಟಗೊಂಡ ವಿವಾದಾತ್ಮಕ ಮಾಧ್ಯಮ ವರದಿಯ ಬಗ್ಗೆ ಕೆನಡಾದ ಜಸ್ಟಿನ್ ಟ್ರುಡೊ ಸರ್ಕಾರ ಸ್ಪಷ್ಟೀಕರಣ ನೀಡಿದೆ.

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೈವಾಡ ಇರುವ ಬಗ್ಗೆ ಉಲ್ಲೇಖಿಸಲಾಗಿದ್ದು, ಮಾಧ್ಯಮಗಳ ಈ ವರದಿ ಊಹಾಪೋಹವಾಗಿದ್ದು, ತಪ್ಪಾದ ಆಧಾರದ ಮೇಲೆ ಬರೆಯಲಾಗಿದೆ ಎಂದು ಪ್ರಿವಿ ಕೌನ್ಸಿಲ್‌ನ ಡೆಪ್ಯುಟಿ ಕ್ಲರ್ಕ್ ಮತ್ತು ಪ್ರಧಾನ ಮಂತ್ರಿಯ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಜಿ. ಡ್ರೂಯಿನ್  ಹೇಳಿಕೆ ನೀಡಿದ್ದಾರೆ.

ಕೆನಡಾ ಸರ್ಕಾರವು ಈ ಹೇಳಿಕೆಯನ್ನು ನೀಡಿಲ್ಲ, ಅಥವಾ ಕೆನಡಾದಲ್ಲಿ ನಡೆಯುವ ಗಂಭೀರ ಅಪರಾಧ ಚಟುವಟಿಕೆಗಳಲ್ಲಿ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಅಥವಾ ಎನ್‌ಎಸ್‌ಎ ಅಜಿತ್ ದೋವಲ್‌ ಇರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಈ ವರದಿ ಕೇವಲ ಊಹಾಪೋಹವನ್ನು ಆಧರಿಸಿದ್ದಾಗಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ಭಾರತದ ಮೇಲೆ ಆಗಾಗ ಸುಳ್ಳು ಆರೋಪ ಹೊರಿಸುತ್ತಲೇ ಬಂದಿರುವ ಜಸ್ಟಿನ್ ಟ್ರೂಡೊ ಸರ್ಕಾರಕ್ಕೆ ಮತ್ತೊಮ್ಮೆ ಮುಜುಗರವಾಗಿದೆ. ಆರೋಪ ಕುರಿತು ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಟ್ರೂಡೊ ಸರ್ಕಾರ ಈ ಹೇಳಿಕೆಯನ್ನು ನೀಡಿದೆ.

ಪ್ರಧಾನಿ ಮೋದಿಯವರಿಗೆ ನಿಜ್ಜರ್ ಹತ್ಯೆಯ ಬಗ್ಗೆ ಗೊತ್ತಿತ್ತು ಎಂದು ಕೆನಡಾದ ಭದ್ರತಾ ಏಜೆನ್ಸಿಗಳು ನಂಬುತ್ತವೆ’ ಎಂದು ಹೆಸರಿಸದ ಭದ್ರತಾ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಭಾರತ ಸರ್ಕಾರ ಈ ಆರೋಪವನ್ನು ನಿರಾಕರಿಸಿತ್ತು.

ನಿಷೇಧಿತ ಭಯೋತ್ಪಾದಕ ಸಂಘಟನೆ ಖಲಿಸ್ತಾನ್ ಟೈಗರ್ ಫೋರ್ಸ್‌ನ ಮಾಸ್ಟರ್ ಮೈಂಡ್ ನಿಜ್ಜರ್ - ಪಂಜಾಬ್‌ನಲ್ಲಿ ಹಿಂದೂ ಪುರೋಹಿತರ ಹತ್ಯೆ ಸೇರಿದಂತೆ ಬಹು ಅಪರಾಧಗಳಿಗಾಗಿ ದೆಹಲಿಯ 'ಮೋಸ್ಟ್ ವಾಂಟೆಡ್' ಭಯೋತ್ಪಾದಕರ ಪಟ್ಟಿಯಲ್ಲಿದ್ದ. ಭಯೋತ್ಪಾದನಾ ನಿಗ್ರಹ ಸಂಸ್ಥೆ ಎನ್‌ಐಎ ಆತನನ್ನು ಸೆರೆಹಿಡಿಯುವ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿತ್ತು.

ಸುದ್ದಿ ಓದಿ