ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ; ಗುಣಮಟ್ಟದ ಶಿಕ್ಷಣಕ್ಕೆ ಒತ್ತು : ಶಾಸಕ ವಿಶ್ವಾಸ ವೈದ್ಯ
Priority given to development of government schools; emphasis on quality education: MLA Vishwas Vai
ಸವದತ್ತಿ 07 : ಕ್ಷೇತ್ರದ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ನಮ್ಮ ಸರ್ಕಾರ ಮತ್ತು ಈ ಕ್ಷೇತ್ರದ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಅವರು ಹೇಳಿದರು. ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ತಾಲೂಕಾ ಶಿಕ್ಷಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುವ ಸುಧಾರಣೆಗಳು ಕೇವಲ ಕಾಗದದ ಮೇಲಿನ ದಾಖಲೆಗಳಿಗೆ ಸೀಮಿತವಾಗಬಾರದು. ಪ್ರತಿ ಶಾಲೆಯಲ್ಲೂ ವಿದ್ಯಾರ್ಥಿಗಳಿಗೆ ಪೂರಕವಾದ ಕಲಿಕಾ ವಾತಾವರಣವನ್ನು ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಶಾಲಾ ಕೊಠಡಿಗಳ ನಿರ್ಮಾಣ, ಸುಸಜ್ಜಿತ ಶೌಚಾಲಯಗಳು, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಶಾಲೆಯಲ್ಲಿಯೇ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ, ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಇಒ ಎ.ಎ. ಖಾಜಿ ಅವರು ಸಭೆಯನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ, ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜ ಬ್ಯಾಳಿ, ಎಸ್.ಎಮ್.ವಾಘೇರಿ, ಹಣಮಂತ ಪೆಟ್ಲೂರ, ಶಿಕ್ಷಣ ಸಮಿತಿಯ ಸದಸ್ಯರು ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 