ಮಹಿಳೆಯರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಆದ್ಯತೆ: ಡಾ. ನಾಗಲಕ್ಷ್ಮೀ ಚೌಧರಿ
Priority on immediate resolution of women's issues: Dr. Nagalakshmi Chaudhary
ಕಾಗವಾಡ, ಸೆ. 07: ಪೊಲೀಸ್ ಠಾಣೆಗಳು ಮಹಿಳೆಯರಲ್ಲಿ ಭಯ ಮೂಡಿಸುವ ಕೇಂದ್ರಗಳಾಗದೆ, ನ್ಯಾಯ ಒದಗಿಸುವ ಭರವಸೆಯ ಬೆಳಕಾಗಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ಅವರು ಸೋಮವಾರ ಕಾಗವಾಡ ಪಟ್ಟಣದ ಕನ್ನಡ ಮಾತಾ ಫೌಂಡೇಶನ್ನ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಜಾಗೃತಿ ಜ್ಯೋತಿ ಬೆಳಗಲಿ, ಸಮಾಜದ ಭವಿಷ್ಯ ಅರಳಲಿ’ ಕಾರ್ಯಕ್ರಮದಲ್ಲಿ ಮಹಿಳೆಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು.
ಸಭೆಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಮಹಿಳೆಯರು ಕಾಗವಾಡ ಬಸ್ ನಿಲ್ದಾಣ, ಆರೋಗ್ಯ ಕೇಂದ್ರ ಹಾಗೂ ಪಟ್ಟಣದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕುರಿತು ತಮ್ಮ ಸಮಸ್ಯೆಗಳನ್ನು ಮಂಡಿಸಿದರು.
ಮಹಿಳೆಯರು ಪ್ರಸ್ತಾಪಿಸಿದ ಪ್ರತಿಯೊಂದು ಸಮಸ್ಯೆಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸಬೇಕು. ಸಮಸ್ಯೆಗಳ ಕುರಿತು ಲಿಖಿತ ಮಾಹಿತಿಯನ್ನು ತಮಗೆ ನೀಡುವಂತೆ ಡಾ. ನಾಗಲಕ್ಷ್ಮೀ ಚೌಧರಿ ಸೂಚಿಸಿದರು.
ಸ್ಥಳದಲ್ಲಿಲ್ಲದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಮಹಿಳೆಯರ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಅವರು ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಬಸ್ ನಿಲ್ದಾಣ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಪರೀಶೀಲನೆಯನ್ನೂ ನಡೆಸಿದರು.
ಕಾರ್ಯಕ್ರಮದಲ್ಲಿ ಯುವ ಮುಖಂಡ ದಾದಾನಂದ ಸವದಿ, ತಹಶೀಲ್ದಾರ್ ರವೀಂದ್ರ ಹಾದಿಮನಿ, ತಾ.ಪಂ. ಇಒ ವೀರಣ್ಣ ವಾಲಿ, ಸಿಡಿಪಿಒ ಸಂಜೀವಕುಮಾರ ಸದಳಗಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಸನಗೌಡ ಕಾಗೆ, ಬಿಸಿಎಂ ಅಧಿಕಾರಿ ವೆಂಕಟೇಶ ಕುಲಕರ್ಣಿ, ಉಪ ತಹಶೀಲ್ದಾರ್ ಅಣ್ಣಾಸಾಬ್ ಕೋರೆ,
ದಲಿತ ಮುಖಂಡ ಸಂಜಯ ತಳವಳಕರ, ಮುಖಂಡರಾದ ಜ್ಯೋತಿಕುಮಾರ ಪಾಟೀಲ, ವಿನಾಯಕ ಚೌಗುಲೆ, ರವಿ ಕಾಂಬಳೆ, ಪೂಜಾ ಕಾಂಬಳೆ, ಸಿದ್ದು ಒಡೆಯರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 