ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ
Prize distribution to winners of ball badminton tournament
ವಿಜಯಪುರ 10: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 2025ಹಿ26 ನೇ ಸಾಲಿನ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡವು ಪ್ರಥಮ ಸ್ಥಾನವನ್ನು ಗಳಿಸಿದೆ. ಇತ್ತೀಚೆಗೆ ಮಹಿಳಾ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡ ಹಾಗೂ ರಾಣೆಬೆನ್ನೂರಿನ ಕೆ.ಎಲ್.ಇ. ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯದ ತಂಡ ಮುಖಾಮುಖಿಯಾಗಿದ್ದವು. ವಿಜೇತ ಹಾಗೂ ರನ್ನರ್-ಅಪ್ ತಂಡಗಳಿಗೆ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣನವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಹನುಮಂತಯ್ಯ ಪೂಜಾರಿ ಬಹುಮಾನಗಳನ್ನು ವಿತರಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 