ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆ ಅಭಿವೃದ್ಧಿ ಕಾರ್ಯಕ್ರಮ
Professional Resume Writing Development Program
ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆ ಅಭಿವೃದ್ಧಿ ಕಾರ್ಯಕ್ರಮ
ವಿಜಯಪುರ, 11 : ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆ ಅಭಿವೃದ್ಧಿ ಕಾರ್ಯಕ್ರಮ ಬರವಣಿಗೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ಗುರುವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ ಎ.ಎಸ್.ಪಿ ಕಾಮರ್ಸ್ ಕಾಲೇಜಿನ ಎಂ.ಬಿ.ಎ ವಿಭಾಗದ ನಿರ್ದೇಶಕ ಡಾ. ಚಿದಾನಂದ ಬ್ಯಾಹಟ್ಟಿ ಮಾತನಾಡಿ, ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆಯಲ್ಲಿ ಇರಬೇಕಾದ ಘಟಕಾಂಶಗಳ ಕುರಿತು ಸವಿವರವಾಗಿ ಮಾಹಿತಿ ನೀಡಿದರು. ಇದೇ ವೇಳೆ ಪ್ರಶಿಕ್ಷಣಾರ್ಥಿಗಳಿಗೆ ಮಾದರಿ ಬರವಣಿಗೆಯನ್ನು ಯನ್ನು ಸಿದ್ಧಪಡಿಸಿ ತೋರಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಸಹಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಡಾ.ಎಂ.ಬಿ. ಕೋರಿ, ಸಹಾಯಕ ಪ್ರಾಧ್ಯಾಪಕ ಡಾ. ಜೆ.ಎಸ್. ಪಟ್ಟಣಶೆಟ್ಟಿ, ಡಾ. ಬಿ.ಎಸ್. ಹಿರೇಮಠ, ಎಸ್. ಎಸ್. ಪಾಟೀಲ, ಪಿ. ಡಿ ಮುಲ್ತಾನಿ, ಡಾ. ಎಸ್.ಪಿ. ಶೇಗುಣಸಿ, ಮಲ್ಲಯ್ಯ ಎಸ್. ಹಿರೇಮಠ ದೈಹಿಕ ಶಿಕ್ಷಣ ನಿರ್ದೇಶಕ ಎಂ. ಪಿ. ಕುಪ್ಪಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.ಪ್ರಶಿಕ್ಷಣಾರ್ಥಿ ವೈಷ್ಣವಿ ಹಡಪದ ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 