ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದ ಯೋಜನಾ ನಿರ್ದೇಶಕ ರವಿ ಬಂಗಾರ್ಪ
Project Director Ravi Bangarpa inspected various works
ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದ ಯೋಜನಾ ನಿರ್ದೇಶಕ ರವಿ ಬಂಗಾರ್ಪ
ರಾಯಬಾಗ, 04 : ತಾಲೂಕಿನ ವಿವಿಧ ಗ್ರಾ.ಪಂಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿದ್ದ ವಿವಿಧ ಕಾಮಗಾರಿಗಳನ್ನು ಜಿ.ಪಂ ಯೋಜನಾ ನಿರ್ದೇಶಕ ರವಿ ಬಂಗಾರ್ಪ ಅವರು ಮಂಗಳವಾರ ಪರೀಶೀಲಿಸಿದರು. ತಾಲೂಕಿನ ನಸಲಾಪೂರ, ಮೇಖಳಿ, ನಂದಿಕುರಳಿ ಗ್ರಾಪಂಯಲ್ಲಿನ ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿ, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಲಮಿತಿಯಲ್ಲಿ ಎಲ್ಲ ನರೇಗಾ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಕಾಮಗಾರಿಗಳ ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಕೂಲಿಕಾರರ ಸಮಸ್ಯೆ ಆಲಿಸಿದರು. ಬಳಿಕ ಕೂಲಿಕಾರರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಕದ್ದು, ತಾಂತ್ರಿಕ ಸಂಯೋಜಕ ಅಶೋಕ ಪೂಜಾರಿ, ಐಇಸಿ ಸಂಯೋಜಕ ಮುತ್ತುರಾಜ್ ಗದಾಡಿ ಹಾಗೂ ಗ್ರಾ.ಪಂ ಸಿಬ್ಬಂದಿ ಮತ್ತು ನರೇಗಾ ಕೂಲಿಕಾರರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 