ಭರವಸೆ ಬಜೆಟ್, ಶಿಕ್ಷಣ ಕ್ಷೇತ್ರದ ಕಡೆಗಣನೆ : ಎಸ್‌ಎಫ್‌ಐ ಆಕ್ರೋಶ
Promised budget, neglect of education sector: SFI outraged
ಹಾವೇರಿ 06 : ಶಿಕ್ಷಣ ಕ್ಷೇತ್ರಕ್ಕೆ ಕೇವಲ 47,224 ಕೋಟಿ ರೂಪಾಯಿ 9.5ಅ ಹಣ ಮೀಸಲಿಟ್ಟಿದೆ. ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ಶಿಕ್ಷಣವನ್ನು ಗ್ಯಾರಂಟಿ ಪಟ್ಟಿಗೆ ಸೇರಿಸಬೇಕಿತ್ತು. ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಸಾಬೀತಾಗಿದೆ.ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸಬೇಕು ಹಾಗೂ ರೋಹಿತ್ ವೇಮುಲ್ಲ ಕಾಯ್ದೆ ಜಾರಿಯಾಗಬೇಕು ಎಂದು ಎಸ್‌ಎಫ್‌ಐ ಹೋರಾಟ ನಡೆಸಿದ ಭಾಗವಾಗಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವುದು ಹಾಗೂ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ?ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ’ವನ್ನು ನಿಲ್ಲಿಸಲು ?ರೋಹಿತ್ ವೇಮುಲ ಕಾಯ್ದೆ’ಯನ್ನು ಘೋಷಣೆಯನ್ನು ಎಸ್‌ಎಫ್‌ಐ ಸ್ವಾಗತಿಸುತ್ತದೆ.ಸವಣೂರು ತಾಲ್ಲೂಕಿಗೆ ಅಲ್ಪಸಂಖ್ಯಾತ ಮಹಿಳಾ ಪದವಿ ಪೂರ್ವ ಕಾಲೇಜ್, ಧಾರವಾಡ- ಬೆಂಗಳೂರು ಕಡೆಗಳಲ್ಲಿ ವಿದ್ಯಾರ್ಥಿ ಕ್ಯಾಂಟೀನ್ ಘೋಷಣೆ ಮಾಡಿದು ಸ್ವಾಗತ ಪ್ರತಿ ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕಿತ್ತು.
800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಿರುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡುವುದಾಗಿ ತಿಳಿಸಿದೆ. ಆದರೆ ಈ ಯೋಜನೆಯ ಹೆಸರಿನಲ್ಲಿ ಯಾವುದೇ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿದ ಶಾಲೆಗಳಿಗೆ ಹಾಗೂ ಕೆ ಪಿ ಎಸ್ ಶಾಲೆಗಳಿಗೆ ವೀಲೀನ ಮಾಡಬಾರದು ಎಂದು ಎಸ್‌ಎಫ್‌ಐ ಒತ್ತಾಯಿಸುತ್ತದೆ. ರಾಜ್ಯದಲ್ಲಿ ಒಟ್ಟು 62,000 ಶಿಕ್ಷಕ ಹುದ್ದೆಗಳು ಖಾಲಿ ಇದ್ದು ಕೇವಲ 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ ಆದರೆ ಉಳಿದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ತಿಳಿಸಿಲ್ಲ ಆದರಿಂದ ಖಾಲಿ ಇರುವ 62,000 ಹುದ್ದೆಗಳನ್ನು ಭರ್ತಿ ಮಾಡಲು ಎಸ್‌ಎಫ್‌ಐ ಒತ್ತಾಯಿಸುತ್ತದೆ.ವಸತಿ ನಿಲಯದ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 4,500 ರೂ ಗಳಿಗೆ ಹೆಚ್ಚಿಸಬೇಕೆಂದು ಬೇಡಿಕೆಯ ನೀರೀಕ್ಷೆ ಹುಸಿಯಾಗಿದ್ದು, ಸಮಾಜ ಕಲ್ಯಾಣ, ಬಿಸಿಎಮ್, ಅಲ್ಪಾ ಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಇರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕ ಬೋಜನ ವೆಚ್ಚವನ್ನು ಬೆಲೆ ಏರಿಕೆ ದಿನಗಳಲ್ಲೂ ಹೆಚ್ಚಳ ಮಾಡದಿರುವುದು ಖಂಡನೀಯ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ಒದಗಿಸಲು ಅಸಾಧ್ಯವಾಗುತ್ತದೆ. 187 ಹೊಸ ಹಾಸ್ಟೆಲ್ ಘೋಷಣೆ ಮಾಡಲಾಗಿದೆ ಅದರಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ 50, ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿ ಜಿಲ್ಲೆಗೆ ತಲಾ ಒಂದು ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ 62, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 50, ಅಲ್ಪ ಸಂಖ್ಯಾತರ ಇಲಾಖೆಯಿಂದ 25 ಹೊಸ ಹಾಸ್ಟೆಲ್ ಹಾಗೂ ವಸತಿ ಶಾಲೆಗಳು ಪ್ರಾರಂಭ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಆದರೆ ಕನಿಷ್ಠ 500 ಹೊಸ ಹಾಸ್ಟೆಲ್ ವಿದ್ಯಾರ್ಥಿಗಳ ಬೇಡಿಕೆ ಹುಸಿಯಾಗಿದೆ. ನೂತನವಾಗಿ 40 ಹೋಬಳಿಗಳಲ್ಲಿ ಎಸ್ಸಿ/ಎಸ್ಟಿ ಹೊಸ ವಸತಿ ಶಾಲೆಗಳ, 31 ವಸತಿಯುತ ಪದವಿ ಪೂರ್ವ ಕಾಲೇಜುಗಳು, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ವಸತಿ ನಿಲಯಗಳು, 34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ. ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ. ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು ?25 ಕೋಟಿ. ಘೋಷಣೆ ಮಾಡಿದ್ದು ಎಸ್‌ಎಫ್‌ಐ ಹೋರಾಟದ ಪ್ರತಿಫಲವಾಗಿದೆ.ಇನ್ನುಳಿದಂತೆ ರಾಜ್ಯ ಬಜೆಟ್ ಅಲ್ಲಿ ವಿಶ್ವ ವಿದ್ಯಾಲಯಗಳಿಗೆ ಯಾವುದೇ ಹೆಚ್ಚಿನ ಅನುದಾನ ನೀಡಿಲ್ಲ. ಸರ್ಕಾರಿ ವಿಶ್ವವಿದ್ಯಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಬೇಕಿತ್ತು ವಿಶೇಷವಾಗಿ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ 9 ನೂತನ ವಿವಿಗಳಿಗೆ ವಿಶೇಷ ಅನುದಾನ ಘೋಷಿಸಿ ಮೇಲೆತ್ತುವ ಕೆಲಸ ಮಾಡಬೇಕಿತ್ತು.
ರೈತ ವಿದ್ಯಾನಿಧಿ, ವಿದ್ಯಾಸಿರಿ ವಿತರಣೆ ಪುನರ್ ಘೋಷಣೆ ಮಾಡಬೇಕಿತ್ತು. ಕಡಿತ ಮಾಡಿದ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನ ಸೇರಿದಂತೆ ಎಲ್ಲಾ ವಿಭಾಗದ ಎಲ್ಲಾ ರೀತಿಯ ಬಾಕಿ ಇರುವ ವಿದ್ಯಾರ್ಥಿ ವೇತ ಬಿಡುಗಡೆ ಹಾಗೂ ಹೆಚ್ಚಿಸುವ ಅವಶ್ಯಕತೆ ಇತ್ತು. ಶುಲ್ಕ ಪುನರ್ ಪಾವತಿ, ಉಚಿತ ಲ್ಯಾಪ್ಟಾಪ್, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಡಿ ದರ್ಜೆಯ ಸಿಬ್ಬಂದಿ ನೇಮಕ ಸೇರಿದಂತೆ ಮುಂತಾದ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಹಾಗೂ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30ಅ ಮೀಸಲಿಡಬೇಕಿತ್ತು.ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಃಖಅ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಿರುವುದು. ನೂತನ ಶ್ರಮಿಕ ವಸತಿ ಶಾಲೆಗಳು ಮಂಜೂರು ಮಾಡಿರುವುದನ್ನು ಎಸ್‌ಎಫ್‌ಐ ಸ್ವಾಗತಿಸುತ್ತದೆ. ಇದು ಕೂಡಲೇ ಕಾರ್ಯರೂಪಕ್ಕೆ ಬರಬೇಕಿದೆ. ಘೋಷಣೆಗಳು ಭಾಷಣವಾಗದೆ ಜಾರಿಗೊಳಿಸಲು ಮುಂದಾಗಬೇಕೆಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪ್ರತಿಕ್ರಿಯಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 