ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ
Property worth crores of rupees handed over to the government, Masonic Hall land taken over by the
ಲೋಕದರ್ಶನ ವರದಿ
ಬಳ್ಳಾರಿ 06: ನಗರದ ಪೋಲಾ ಹೋಟೆಲ್ ಎದುರಿನ ಮೆಸೋನಿಕ್ ಹಾಲ್ಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಕುರಿತು ಹಲವು ವರ್ಷಗಳಿಂದ ಆಡಳಿತಾತ್ಮಕ ಮತ್ತು ಕಾನೂನು ಪ್ರಕ್ರಿಯೆಗಳು ನಡೆಯುತ್ತಿದ್ದವು. ಸಂಬಂಧಪಟ್ಟ ದಾಖಲೆಗಳು ಹಾಗೂ ಆದೇಶಗಳ ಆಧಾರದ ಮೇಲೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗವನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಂಡರು.
ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಜಾಗವನ್ನು ವಶಕ್ಕೆ ಪಡೆದ ಬಳಿಕ ಸರ್ಕಾರದ ಸ್ವತ್ತಾಗಿದೆ ಎಂಬ ಫಲಕವನ್ನು ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಮಾತನಾಡಿ, ಬಳ್ಳಾರಿಯ ಟಿ.ಎಸ್ ಸಂಖ್ಯೆ 307 ರಲ್ಲಿರುವ ಒಟ್ಟು 4 ಎಕರೆ 44 ಸೆಂಟ್ಸ್ ವಿಸ್ತೀರ್ಣದ ಜಾಗವನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರದ ಸುಪರ್ದಿಗೆ ಪಡೆದಿದ್ದಾರೆ.
ಈ ಜಮೀನು 1884 ರಿಂದಲೂ ಮೆಸೋನಿಕ್ ಹಾಲ್' ಹೆಸರಿನಲ್ಲಿ ಖಾಸಗಿಯವರ ಬಳಕೆಯಲ್ಲಿ ಇತ್ತು. ಆದರೆ, ಈ ಆಸ್ತಿಗೆ ಸಂಬಂಧಿಸಿದಂತೆ ನಿಯಮಾನುಸಾರ ಯಾವುದೇ ರೀತಿಯ ಸದುಪಯೋಗ ಅಥವಾ ಅಗತ್ಯ ನವೀಕರಣಗಳು ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾಗವನ್ನು ಪರೀಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಇದನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಕಂದಾಯ ಇಲಾಖೆಗೆ ಮಹತ್ವದ ಆದೇಶ ಹೊರಡಿಸಿದ್ದರು.
ಜಿಲ್ಲಾಧಿಕಾರಿಗಳ ಖಡಕ್ ಆದೇಶದ ಬೆನ್ನಲ್ಲೇ ಅಧಿಕಾರಿಗಳ ತಂಡ, ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಕಾನೂನಾತ್ಮಕವಾಗಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದುಕೊಂಡಿದೆ ಎಂದು ಮಾಹಿತಿ ನೀಡಿದರು.
ಕಾರ್ಯಾಚರಣೆಯಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಡಿಡಿಎಲ್ಆರ್ ಪ್ರಮೋದ್, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ, ಕಂದಾಯ ನೀರೀಕ್ಷಕರು, ಮಹಾನಗರಪಾಲಿಕೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 