ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ರಸ್ತೆ ತೆಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಲೋಕದರ್ಶನ ವರದಿ,
ಜಮಖಂಡಿ 5: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ವಿದ್ಯಾರ್ಥಿ ಗಳು ವಿಜಯಪೂರ, ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ರಸ್ತೆ ತೆಡೆಯನ್ನು ನಡೆಸಿ ಪ್ರತಿಭಟನೆ ನಡೆಸಿದರು.
ಶಕ್ತಿ ಯೋಜನೆ ಜಾರಿಗೆ ಬಂದ ಹಿನ್ನಲೆಯಲ್ಲಿ ಮಹಿಳೆಯರು ಬಸುಗಳಲ್ಲಿ ತುಂಬಿದರಿಂದ ಶಾಲಾ,ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಇಲ್ಲದೆ ಪರದಾಡುವ ಪರಿಸ್ಥಿತಿ ಬಂದಿದು. ಹೀಗಾಗಿ ಸಿದ್ದಾಪುರ ಗ್ರಾಮದಲ್ಲಿ ಬಸುಗಳು ನಿಲುಗಡೆ ಆಗದೆ ಇವರು ಕಾರಣ ವಿದ್ಯಾರ್ಥಿ ಗಳಿಗೆ ಸರಿಯಾದ ಸಮಯಕ್ಕೆ ಶಾಲಾ, ಕಾಲೇಜಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಇದರಿಂದ ಪಾಠ, ಭೋಧನೆಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಮಖಂಡಿ ಸಾರಿಗೆ ಘಟಕ ಇಲಾಖೆಯಿಂದ ಸಿದ್ದಾಪುರ ಗ್ರಾಮಕ್ಕೆ ಪ್ರತ್ಯೇಕವಾಗಿ ಬಸಗಳ ಸೌಲಭ್ಯವನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು. ರಾಜ್ಯ ಹೆದ್ದಾರಿ ರಸ್ತೆತಡೆ ನಡೆಸಿದ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಕೆಲವು ಗಂಟೆಗಳ ಕಾಲ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಘಟಕ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ. ಪ್ರತ್ಯೇಕ ಬಸಗಳ ಸೌಲಭ್ಯ ಒದಗಿಸುವ ಭರವಸೆಯನ್ನು ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.