ಪಂಚಾಯತ್ ನೌಕರರ ಬೇಡಿಕೆಗೆ ಡಿ.20ಕ್ಕೆ ಬೆಂಗಳೂರು ನಲ್ಲಿ ಪ್ರತಿಭಟನೆ
Protest in Bengaluru on December 20 for the demands of Panchayat employees
ಹೂವಿನಹಡಗಲಿ 17: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಇದೇ ತಿಂಗಳು 20ರಂದು ಬೆಂಗಳೂರು ನಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಗ್ರಾ.ಪಂ.ನೌಕರರ ಸಂಘದ ಜಿಲ್ಲಾದ್ಯಕ್ಷ ಆರ್.ಎಸ್. ಬಸವರಾಜ ತಿಳಿಸಿದರು.ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ’ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ, ಡಾಟಾ ಎಂಟ್ರಿ ಆಪರೇಟರ್, ನಿರುಗಂಟಿಗಳು, ಜವಾನ, ಸ್ವಚ್ಛತಾಗಾರರಿಗೆ ಕಾರ್ಮಿಕರ ಬಿಪಿಎಲ್ ಕಾರ್ಡ್ ರದ್ದು ಪಡಿಸದೆ ಸರ್ಕಾರಕನಿಷ್ಠ ವೇತನ ?36 ಸಾವಿರ ರೂ.ನಿಗದಿ ಪಡಿಸಿ,ಪಂಚಾಯತ್ ನೌಕರರ ನಿವೃತ್ತಿ ನಂತರ ? 10 ಲಕ್ಷ ರೂ.ಇಡಗಂಟು ಕೊಡಿ ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.20ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಸತ್ಯಾಗ್ರಹ ನಡೆಸುವುದಾಗಿ ಹೇಳಿದ ಅವರು 22ರಂದು ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ಪಂಚಾಯತ್ ನೌಕರರ ಸಂಘದ ಪ್ರಧಾನ ಕಾರ್ಯ ದರ್ಶಿ ನಾಗಭೂಷಣ ರೆಡ್ಡಿ, ತಾಲ್ಲೂಕು ಕಾರ್ಯ ದರ್ಶಿ ಮಹಮ್ಮದ್,ಸತೀಶ, ಹೇಮಾವತಿ, ನಾಗಯ್ಯ, ಸುಧಾ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 