ಹೊರಗುತ್ತಿಗೆ ನೌಕಕರನ್ನು ಕೆಲಸದಿಂದ ವಜಾಗೊಳಿಸಿದ್ದಕ್ಕೆ ಪ್ರತಿಭಟನೆ
Protest over dismissal of outsourced seafarers
ಜಮಖಂಡಿ 14 : ನಗರದ ಸರಕಾರಿ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕಕರನ್ನು ಕೆಲಸದಿಂದ ವಜಾಗೊಳಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಹಾಗೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸರಕಾರಿ ಉಪವಿಭಾಗ ತಾಯಿ-ಮಕ್ಕಳ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ,ವಾಸಪ್ಪ ಮುದ್ದಿಗೌಡರ ಬಾಗಿಲಿನಲ್ಲಿ ಕುಳಿತು ಪ್ರತಿಭಟನೆಯನ್ನು ನಡೆಸಿದರು.ಪ್ರತಿಭಟನಾಕರರು ಹಾಗೂ ಮುಖ್ಯ ವೈದ್ಯಾಧಿಕಾರಿ ಮಧ್ಯ ಮಾತಿನ ಚಕುಮಕಿ ನಡೆಯಿತು. ಪ್ರತಿಭಟನಾಕರರ ಬೇಡಿಕೆಗೆ ಸ್ಪಂದಿಸದ ಕಾರಣ ಹೊರಗುತ್ತಿಗೆ ನೌಕಕರರು ಆಸ್ಪತ್ರೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಮತ್ತು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೆಲವು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸವನ್ನು ಮಾಡಿಕೊಂಡು ಬಂದಿರುತ್ತೇವೆ. ಆದರೆ ಇಲ್ಲಿನ ಮುಖ್ಯ ವೈದ್ಯಾಧಿಕಾರಿ ಡಾ,ವಾಸಪ್ಪ ಮುದ್ದಿಗೌಡರ ಅವರು ನಮ್ಮನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಬೇರೆ ತಾಲೂಕಿನ ಜನರನ್ನು ಕೆಲಸಕ್ಕೆ ಸೇರಿಸಿಕೊಂಡು ನಮ್ಮಗೆ ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿದರು.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸುನಂದಾ ಮಠಪತಿ, ಹಣಮಂತ ಕಾಂಬಳೆ, ವಿಜಯ ಘೋರೆ್ಡ, ಯಮುನಾ ಎಂಬ ನೌಕರರನ್ನು ಬೇರೆ ಕಡೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಇನ್ನೂ ಐದಾರು ಜನರು ಹಾಗೂ ಒಬ್ಬ ಪೋಲಿಸ್ ಪೇದೆ ಸಹ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಎಲ್ಲರಿಗೂ ಪೆಟ್ರೋಲ್ ಸಿಡಿದ ಪರಿಣಾಮ ಯಾವುದೇ ಅಗ್ನಿ ಸಂಭವಿಸದ ಕಾರನ ಆಸ್ಪತ್ರೆಯಲ್ಲಿ ಭಾರಿ ಅನಾಹುತ ತಪ್ಪಿದಂತಾಗಿದೆ.
ತಾಯಿ, ಮಗು ಸರಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಏಜೆನ್ಸಿ ಮೂಲಕ ನೇಮಕವಾಗಿದ್ದ ಹತ್ತಕ್ಕೂ ಅಧಿಕ ನೌಕರರನ್ನು ಹೊರಗುತ್ತಿಗೆ ರೋಸ್ಟರ್ ನಿಯಮದ ಪ್ರಕಾರ ಇತ್ತೀಚೆಗೆ ಏಜೆನ್ಸಿಯಿಂದ ವಜಾಗೊಳಿಸಲಾಗಿತ್ತು. ಮರು ನೇಮಕಕ್ಕೆ ಆಗ್ರಹಿಸಿ ನೌಕರರು ತಾಯಿ, ಮಗು ಆಸ್ಪತ್ರೆ ಎದುರು ಧರಣಿ ನಡೆಸಿದ್ದರು. ಬೇರೆ ತಾಲೂಕಿನವರು ನಮ್ಮಲ್ಲಿ ಬೇಡ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಆಕ್ರೋಶಗೊಂಡ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಹಾಗೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಮತ್ತು ಸಾರ್ವಜನಿಕರು ಸೇರಿಕೊಂಡು ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವಂದಿಷ್ಟು ನೌಕರರನ್ನು ಹೆಚ್ಚಿನ ಚಿಕಿತ್ಸೆ ಬೇರೆ ಕಡೆ ರವಾನಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 