ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಒದಗಿಸುವುದು ಎಲ್ಲರ ಹೊಣೆ: ಶಾಸಕ ವಿಶ್ವಾಸ್ ವೈದ್ಯ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಒದಗಿಸುವುದು ಎಲ್ಲರ ಹೊಣೆ: ಶಾಸಕ ವಿಶ್ವಾಸ್ ವೈದ್ಯ  Providing necessary facilities for the education of differently-abled children is everyone's respon

ಸವದತ್ತಿ 14:  ವಿಶೇಷ ಚೇತನ ಮಕ್ಕಳು ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಅವರ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಎಲ್ಲರ ಜವಾಬ್ದಾರಿ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.  ನಗರದ ಗೃಹ ಕಚೇರಿಯಲ್ಲಿ ತಾಲೂಕು ಸಮನ್ವಯ ಶಿಕ್ಷಣ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶೇಷ ಚೇತನ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ಹಾಗೂ ಸಹಾಯಕ ಉಪಕರಣಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.  

ಕಾರ್ಯಕ್ರಮದಲ್ಲಿ ಸುಮಾರು ?10 ಲಕ್ಷ ವೆಚ್ಚದಲ್ಲಿ ತಾಲೂಕಿನ 30 ವಿಶೇಷ ಚೇತನ ಮಕ್ಕಳಿಗೆ ಅಗತ್ಯವಿರುವ ತ್ರಿಚಕ್ರ ವಾಹನಗಳು, ಸಿಪಿ ಚೇರ್ಗಳು, ಶ್ರವಣ ಸಾಧನಗಳು ಸೇರಿದಂತೆ ವಿವಿಧ ಶೈಕ್ಷಣಿಕ ಹಾಗೂ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು.  ಈ ಉಪಕರಣಗಳು ಮಕ್ಕಳ ಶಿಕ್ಷಣ, ದೈನಂದಿನ ಚಟುವಟಿಕೆಗಳು ಹಾಗೂ ಸ್ವಾವಲಂಬಿ ಜೀವನಕ್ಕೆ ನೆರವಾಗಲಿದ್ದು, ಅವರ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಲಿವೆ ಎಂದು ಶಾಸಕರು ತಿಳಿಸಿದರು.  

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಮಾತನಾಡಿ, ವಿಶೇಷ ಚೇತನ ಮಕ್ಕಳ ಶಿಕ್ಷಣ ಮತ್ತು ಜೀವನಮಟ್ಟ ಸುಧಾರಣೆಗೆ ಶಾಸಕರು ಕೈಗೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದರು.  ಕ್ಷೇತ್ರ ಸಮನ್ವಯಾಧಿಕಾರಿ ಎಸ್‌.ವಿ. ಯಾರಡ್ಡಿ ಮಾತನಾಡಿ, ತಾವು ಕೂಡ ವಿಶೇಷ ಚೇತನರಾಗಿದ್ದು, ಪೋಷಕರ ಪ್ರೋತ್ಸಾಹದಿಂದ ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯಲು ಸಾಧ್ಯವಾಗಿದೆ.

ಇಂತಹ ಕಾರ್ಯಕ್ರಮಗಳು ವಿಶೇಷ ಚೇತನ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಗೀರೀಶ್ ಮುನವಳ್ಳಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್ ರಾಠೋಡ್, ಸುರೇಶ್ ತುಪ್ಪದ, ಉಮೇಶ್ ಗೌಡರ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ವಿಶೇಷ ಚೇತನ ಮಕ್ಕಳು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.