ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ಕಾರ್ಯಕ್ರಮ
Public awareness program on the elimination of child labor and juvenile labor
ಗದಗ 30: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ದಿ: 26/1/2026 ರಿಂದ 31/3/2026 ರವರೆಗೆ ನಡೆಯುತ್ತಿರುವ ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ಕಾರ್ಯಕ್ರಮದ ಉದ್ಘಾಟನೆ ಜರುಗಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲಕಾರ್ಮಿಕರಾಗುತ್ತಾರೆ. ಅಷ್ಟೇ ಅಲ್ಲದೇ ಬೇರೆ ಬೇರೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗುವ ಸಾಧ್ಯತೆ ಇರುತ್ತದೆ. ಬಾಲ ಕಾರ್ಮಿಕರು ಕಂಡು ಬರುವ ಕಡೆಗೆ ದಾಳಿ ಮಾಡಿ ಬಾಲಕಾರ್ಮಿಕತೆ ನಿರ್ಮೂಲನೆ ಮಾಡಬೇಕು. ಅಂದಾಗ ಈ ಅಭಿಯಾನವು ಯಶಸ್ವಿಯಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಕಾ0ುರ್ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳು ದೇವರ ಸಮಾನ. ಮಕ್ಕಳ ಬಾಲ್ಯ ನೆಮ್ಮದಿಯಿಂದ ಕೂಡಿರಬೇಕು. ಬಾಲಕಾರ್ಮಿಕತೆಯನ್ನು ತಡೆಗಟ್ಟಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಈ ಪರಿಕಲ್ಪನೆ ನಮ್ಮಲ್ಲಿ ದೃಢವಾಗಿ ನಿಲ್ಲಬೇಕು ಎನ್ನುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ವಕೀಲರಾದ ಗುರುರಾಜ್ ಗೌರಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಸನಾಯಕ, ಕಾರ್ಮಿಕ ನೀರೀಕ್ಷಕರು, ಮಕ್ಕಳ ಸಹಾಯವಾಣಿ ಕೋಆರ್ಡಿನೇಟರ್ , ಸ್ಪಂದನ ಸ್ವಯಂ ಸೇವಾ ಸಂಸ್ಥೆಯವರು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 