ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ಯಶಸ್ವಿಗೆ ಕೈಜೋಡಿಸಿ: ಜಿಲ್ಲಾಧಿಕಾರಿ
ಬಳ್ಳಾರಿ 28: ಜಿಲ್ಲೆಯಲ್ಲಿ ಇದೇ ಜ. 31ರಿಂದ ಫೆ. 3ರವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ನಡೆಯಲಿದ್ದು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. 5 ವರ್ಷದೊಳಗಿನ ಯಾವುದೇ ಮಗು ಕೂಡ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ಮೂಲಕ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೇಳಿದರು. ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ಇದೇ ಜ. 31ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ದೇಶವು ಈಗಾಗಲೇ ಪೋಲಿಯೋ ಮುಕ್ತವಾಗಿದೆ. ಆದರೇ ನೆರೆಹೊರೆಯ ದೇಶಗಳಲ್ಲಿ ಇನ್ನೂ ಇದೆ. ಅದು ನಮ್ಮಲ್ಲಿಯೂ ಮತ್ತೆ ಮರುಕಳಿಸಬಹುದೆಂಬ ಹಿನ್ನೆಲೆಯಲ್ಲಿ ಈ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೂಚನೆ ನೀಡಿದರು.ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಪಲ್ಸ್ ಪೆÇೀಲಿಯೋ ಲಸಿಕಾ ಕಾರ್ಯಕ್ರಮವನ್ನು ಜನಪ್ರತಿನಿಧಿಗಳ ಮೂಲಕ ಉದ್ಘಾಟಿಸಿ ಎಂದು ಹೇಳಿದ ಡಿಸಿ ಮಾಲಪಾಟಿ ಅವರು ಎಲ್ಲಾ ಬೂತ್ಗಳ ಉದ್ಘಾಟನೆಯನ್ನು ಅಲ್ಲಿನ ಜನಪ್ರತಿನಿಧಿಗಳ ಮೂಲಕ ಅದ್ಧೂರಿಯಾಗಿ ನೆರವೇರಿಸಿ ನಾಲ್ಕು ದಿನಗಳ ಕಾಲ ಪಲ್ಸ್ ಪೆÇೀಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
*324818 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಪ್ರಸ್ತುತ ಪಲ್ಸ್ ಪೆÇೀಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 5 ವರ್ಷದೊಳಗಿನ 324818 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ನಗರ ಪ್ರದೇಶದಲ್ಲಿ 549 ಮತ್ತು ಗ್ರಾಮೀಣ ಪ್ರದೇಶದಲ್ಲಿ 1357 ಲಸಿಕಾ ಬೂತ್ಗಳು ಸೇರಿದಂತೆ ಜಿಲ್ಲೆಯಲ್ಲಿ 1906 ಲಸಿಕಾ ಬೂತ್ಗಳನ್ನು ಮಕ್ಕಳಿಗೆ ಲಸಿಕೆ ನೀಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 1720 ಮನೆ ಭೇಟಿ ತಂಡಗಳು, 103 ಟ್ರಾನ್ಸಿಟ್ ತಂಡಗಳು, 22 ಮೊಬೈಲ್ ತಂಡಗಳು, ಮೈಗ್ರಟರಿ ಮತ್ತು ಹೈ ರಿಸ್ಕ್ ಏರಿಯಾದಲ್ಲಿ 602 ತಂಡಗಳು, ಹೈರಿಸ್ಕ್ ಏರಿಯಾದಲ್ಲಿ ಮನೆ ಮನೆ ಭೇಟಿ ಮಾಡಲು 166 ತಂಡಗಳು ಸೇರಿದಂತೆ ಒಟ್ಟು 1845 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಅನಿಲಕುಮಾರ್ ಅವರು ಸಭೆಗೆ ವಿವರಿಸಿದರು.
ನಗರ ಪ್ರದೇಶದಲ್ಲಿ 1252 ಮತ್ತು ಗ್ರಾಮೀಣ ಪ್ರದೇಶದಲ್ಲಿ 2830 ವ್ಯಾಕ್ಸಿನೇಟರ್ಸ್ಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಈ ಅಭಿಯಾನ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ 363 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಮತ್ತು 8 ಜನ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. 415785 ಡೋಸ್ ಲಸಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಡಿಎಚ್ಒ ಡಾ.ಎಚ್.ಜನಾರ್ಧನ್, ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.