ಚಿರಂಜೀವಿ ಸರ್ಜಾ ಅಭಿನಯದ "ರಣಂ" ರಾಜ್ಯಾದ್ಯಂತ ಬಿಡುಗಡೆ
ಬೆಂಗಳೂರು, ಮಾರ್ಚ್ 25:ಕಳೆದವರ್ಷ ನಿಧನರಾದ ಚಿರಂಜೀವಿ ಸರ್ಜಾ ಅವರು ಅಭಿನಯಿಸಿದ್ದ "ರಣಂ" ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಕನಕಪುರ ಅವರು ನಿರ್ಮಾಣ ಮಾಡಿರುವ 21ನೇ ಚಿತ್ರ ಇದಾಗಿದ್ದು, ಕಿರಣ್ ಗೌಡ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. "ರಣಂ" ಚಿರಂಜೀವಿ ಸರ್ಜಾ ಅವರು ನಟಿಸಿ ಡಬ್ಬಿಂಗ್ ಮಾಡಿರುವ ಕೊನೆಯ ಚಿತ್ರ. ವಿ.ಸಮುದ್ರ ನಿರ್ದೇಶನದ ಈ ಚಿತ್ರಕ್ಕೆ ರವಿಶಂಕರ್ ಹಾಗೂ ಎಸ್ ಚಿನ್ನ ಸಂಗೀತ ನೀಡಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್ ಹಾಗೂ ಎ.ಪಿ.ಅರ್ಜುನ್ ರಚಿಸಿದ್ದಾರೆ. ಸಂಭಾಷಣೆಯನ್ನು ಪಾರ್ವತಿ ಚಂದು ಮತ್ತು ಮೋಹನ್ ಬರೆದಿದ್ದಾರೆ. ಚಿರಂಜೀವಿ ಸರ್ಜಾ, ‘ಆ ದಿನಗಳು’ ಚೇತನ್, ವರಲಕ್ಷ್ಮೀ ಶರತ್ ಕುಮಾರ್, ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮಧುಸೂದನ್, ಕಾರ್ತಿಕ್, ಅಭಿಲಾಶ್, ಹರೀಶ್, ಪ್ರವೀಣ್, ಬೆಸೆಂಟ್ ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.