ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿಷಯ ಪ್ರಸ್ತಾಪ
RSS content proposal to mislead people
ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿಷಯ ಪ್ರಸ್ತಾಪ
ಹೂವಿನಹಡಗಲಿ 15 : ಸಿಲಿಕಾನ್ ಸಿಟಿ ಬೆಂಗಳೂರು ರಸ್ತೆಗಳಲ್ಲೇ ಗುಂಡಿ ಬಿದ್ದಿವೆ. ರಾಜ್ಯದ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ. ಸರ್ಕಾರದ ಕಾರ್ಯವೈಖರಿ ಹೇಗಿದೆಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಶಾಸಕ ಕೃಷ್ಣನಾಯ್ಕ ನಿಷೇಧಿಸಲು ಸಿಎಂಗೆ ಪತ್ರ ಬರೆದಿದ್ದಾರೆ’ ಎಂದು ಶಾಸಕ ಕೃಷ್ಣನಾಯ್ಕ ಟೀಕಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ನಿರ್ಬಂಧಿಸಲು ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರಿಂದ ಸಾಧ್ಯವಾಗಿಲ್ಲ. ಪ್ರಿಯಾಂಕ್ ಯಾವ ಲೆಕ್ಕ. ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ರಸ್ತೆಗಳಲ್ಲೇ ಗುಂಡಿ ಬಿದ್ದಿವೆ. ರಾಜ್ಯದ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ. ಸರ್ಕಾರದ ಕಾರ್ಯವೈಖರಿ ಹೇಗಿದೆ ಎಂಬುದನ್ನು ಕಾಂಗ್ರೆಸ್ ಹಿರಿಯ ಶಾಸಕ ಆರ್. ವಿ.ದೇಶಪಾಂಡೆ ಹೇಳಿದ್ದಾರೆ. ಸರ್ಕಾರ ನಡೆಸುವವರು ಜನರ ದಿಕ್ಕು ತಪ್ಪಿಸುವ ವಿಷಯಗಳನ್ನು ಬಿಟ್ಟು ಅಭಿವೃದಿಯ ಕಡೆ ಗಮನಹರಿಸಲಿ ಎಂದು ಒತ್ತಾಯಿಸಿದರು.ಆರ್‌ಎಸ್‌ಎಸ್ ಶತಾಬಿ ಪ್ರಯುಕ್ತ ಇದೇ 18 ರಂದು ಪಟ್ಟಣದಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಗಣವೇಷಧಾರಿಗಳು ಪಾಲ್ಗೊಳ್ಳಲಿದ್ದು, ಎಲ್ಲ ನಾಗರಿಕರಿಗೂ ಮುಕ್ತ ಆಹ್ವಾನ ನೀಡಿದ್ದೇವೆ ಎಂದು ತಿಳಿಸಿದರು.ಅಧ್ಯಕ್ಷ ಬಿಜೆಪಿ ಮಂಡಲ ಮಲ್ಲಿಕಾರ್ಜುನ ಪೂಜಾರ್, ಮುಖಂಡ ರಾದ ಈಟಿ ಲಿಂಗರಾಜ, ಎಚ್.ಪೂಜಪ್ಪ, ಮಂಜುನಾಥ ಜೈನ್, ಶಂಕರ್ ನವಲಿ, ಆರಿ್ಟ.ನಾಗರಾಜ ಇದ್ದರು.ಕ್ಷಮೆ ಪ್ರಿಯಾಂಕ್ ಖರ್ಗೆ ಯಾಚಿಸಲಿ: ’ಮಹಾತ್ಮ ಗಾಂಧೀಜಿ, ನೆಹರೂ, ಅಂಬೇಡ್ಕರ್ ಅವರೇ ಆರ್ ಎಸ್‌ಎಸ್ ಚಟುವಟಿಕೆಗಳನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ. ಸಚಿವ ಸ್ಥಾನ ಉಳಿಸಿಕೊಳ್ಳುವುದಕ್ಕಾಗಿ ಸಂಘವನ್ನು ನಿಷೇಧಿಸಲು ಪತ್ರ ಬರೆದಿರುವ ಪ್ರಿಯಾಂಕ ಖರ್ಗೆ ಬೇಷರತ್ ಕ್ಷಮೆ-ಯಾಚಿಸಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಂಜೀವರೆಡ್ಡಿ ಆಗ್ರಹಿಸಿದರು.’ತಾಕತ್ತಿದ್ದರೆ ಅವರು ಆರ್‌ಎಸ್‌ಎಸ್ ಬ್ಯಾನ್ ಮಾಡಲಿ. ಆಗ ರಾಷ್ಟ್ರ ಭಕ್ತರು ದೇಶದಿಂದಲೇ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಾರೆ’ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 