ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ: ಪ್ರಲ್ಹಾದ್ ಜೋಶಿ
ರಾಯಚೂರು,
ಡಿ.14 ರಾಹುಲ್ ಗಾಂಧಿ ಓರ್ವ ಅಪ್ರಬುದ್ಧ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ಯಾರೋ ಭಾಷಣ ಬರೆದು ಕೊಡುತ್ತಾರೆ.
ವಿದೇಶಕ್ಕೆ ಹೋಗಿ ಅವರ ಬುದ್ಧಿ ಭ್ರಮಣೆಯಾಗಿರಬೇಕು ಎಂದು ಕುಟುಕಿದರು. ಆರ್ ಟಿಪಿಎಸ್ ವೈಟಿಪಿಎಸ್
ಗೆ ಕಲ್ಲಿದ್ದಲು ನೀಡುವ ಕುರಿತು ಮಾತನಾಡಿದ ಅವರು, ರಾಜ್ಯಕ್ಕೆ ಒಳ್ಳೆಯ ರೀತಿಯಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತದೆ.
ಶಾಖೋತ್ಪನ್ನ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ ಇಲ್ಲ. ಪ್ರಧಾನ ಮಂತ್ರಿಯವರು ವಿದ್ಯುತ್ ಉತ್ಪಾದನೆಗೆ
ವಿಶೇಷ ಆದ್ಯತೆ ನೀಡಿದ್ದಾರೆ ಎಂದರು. ಧಾರವಾಡ ಪೇಡ ಹಂಚಿದ್ದು ಬೇರೆ ಕಾರಣಕ್ಕೆ ಆದರೆ ,ಅದನ್ನು ಸಿಎಬಿಗೆ
ಹಂಚಿದ್ದಾರೆ ಎಂದರೆ ತಪ್ಪಿಲ್ಲ. ಸಿಎಬಿಯಿಂದ ಅಲ್ಪಸಂಖ್ಯಾತರಿಗೆ
ಏನು ತೊಂದರೆಯಾಗುತ್ತದೆ ಹೇಳಿ ಎಂದು ಅವರು ಪ್ರಶ್ನಿಸಿದರು.
ಸಿಂಧನೂರಿನಲ್ಲಿ ಬಾಂಗ್ಲಾ ಶಿಬಿರದಲ್ಲಿರುವವರು ಹಲವು ಬಾರಿ ಪೌರತ್ವಕ್ಕಾಗಿ ಮನವಿ ಮಾಡಿದ್ದರು. ಸಿಎಬಿಯಲ್ಲಿ
ನಾಗರಿಕತ್ವ ಕೊಡುವುದಿದೆಯೇ ಹೊರತು ಕಸಿದುಕೊಳ್ಳುವುದಿಲ್ಲ.
ರಾಷ್ಟ್ರೀಯ ವಿಷಯದಲ್ಲಿ ರಾಜಕೀಯ ಮಾಡಬಾರದು, ಆದರೆ ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ
ಎಂದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 