ರಾಮನಗರ -ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ
Ramnagar-Goa National Highway collapses
ರಾಮನಗರ -ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ
ಕಾರವಾರ, 05 : ರಾಮನಗರ- ಗೋವಾ ರಾಷ್ಟ್ರೀಯ ಹೆದ್ದಾರಿ ಎನ್ ಎಚ್ -4 ಎ(ಗೋವಾ ವ್ಯಾಪ್ತಿ ಪ್ರದೇಶ) ರಸ್ತೆ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ಹೆದ್ದಾರಿ ಮೇಲಿನ ಸಂಚಾರ ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಜುಲೈ 5ರಂದು ರಸ್ತೆ ಕುಸಿತವಾಗಿದ್ದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕಲೆಕ್ಟರ್ (ಗೋವಾ ದಕ್ಷಿಣ) ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದ್ದರ ಹಿನ್ನಲೆಯಲ್ಲಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲಿ ದಿನನಿತ್ಯ ಅಗತ್ಯ ಸೇವೆಗಳಡಿ ಬರುವ ತರಕಾರಿ ಲಘು ವಾಹನ, ಹಾಲಿನ ವಾಹನ, ಇನ್ನತರೆ ಲಘು ವಾಹನಗಳ ಸಾರ್ವಜನಿಕ ಸಂಚಾರ ಹೊರತು ಪಡಿಸಿ ಅಧಿಕ ಭಾರದ ವಾಹನ, ಟ್ರಕ್ ಗಳ ಸಂಚಾರವನ್ನು ಜುಲೈ 5 ರಿಂದ ನಿಷೇಧಿಸಲಾಗಿದೆ. ಈ ನಿಷೇಧ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 