ಕೇಂದ್ರ ಪುರಸ್ಕೃತ ಯೋಜನೆಗಳ ಜಾಗೃತಿ ಅಭಿಯಾನ ಅಂಗವಾಗಿ ರಂಗೋಲಿ ಸ್ಪರ್ಧೆ
Rangoli competition as part of awareness campaign on centrally sponsored schemes
ಬಳ್ಳಾರಿ 08: ವಿಕಸಿತ ಭಾರತ ಜಿ ರಾಮ್ ಜಿ ವಂದೇ ಮಾತರಂ ರಾಷ್ಟ್ರೀಯ ಗೀತೆಯ 150 ನೇ ವರ್ಷಾಚರಣೆ, ಕೇಂದ್ರ ಪುರಸ್ಕೃತ ಯೋಜನೆಗಳ ಜಾಗೃತಿ ಅಭಿಯಾನ ಮತ್ತು ವಸ್ತು ಪ್ರದರ್ಶನ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಗುರುವಾರ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ವಯಂ ಸೇವಾಸಂಸ್ಥೆಗಳ ಮಹಿಳೆಯರಿಂದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಅನುಷ್ಠಾನಗೊಳಿಸಿರುವ ಪೋಷಣ್ ಅಭಿಯಾನ, ಬೇಟಿ ಬಚಾವೋ ಬೇಟಿ ಪಡಾವೋ, ಮಾತೃವಂದನಾ ಯೋಜನೆಗಳು ಸೇರಿದಂತೆ ಮುತಾದವುಗಳ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗುವಂತೆ ರಂಗೋಲಿ ಸ್ಪರ್ಧೆ ನಡೆಯಿತು.
ಜಿಲ್ಲೆಯ ವಿವಿಧೆಡೆಯಿಂದ ಬಂದ ಮಹಿಳೆಯರು, ದವಸ ಧಾನ್ಯ, ಹೂ, ರಂಗೋಲಿಗಳ ವಿವಿಧ ಬಣ್ಣಗಳ ಮೂಲಕ ಆಕರ್ಷಕವಾಗಿ ಚಿತ್ತಾರದಿಂದ ರಂಗೋಲಿ ಹಾಕಿದರು.
ಕಾರ್ಯಕ್ರಮ ಕುರಿತು ಆಕಾಶವಾಣಿಯೊಂದಿಗೆ ಮಾತನಾಡಿದ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಅವರು ಮಾಹಿತಿ ನೀಡಿ ವಿಕಸಿತ ಭಾರತದ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಗಳ ಮೂಲಕ ಫಲಾನುಭವಿಗಳಿಗೆ ಇನ್ನಷ್ಟು ಮಾಹಿತಿ ನೀಡಲಾಗುವುದು ಎಂದರು.
ಮಹಿಳಾ ಮತ್ತು ಇಲಾಖೆಯ ಮೇಲ್ವಿಚಾರಕಿ ಮಹೇಶ್ವರಿ ಅವರು ಮಾತನಾಡಿ, ರಂಗೋಲಿ ಸ್ಪರ್ಧೆ ಮೂಲಕ ಇಲಾಖೆಯ ವಿವಿಧ ಯೋಜನೆಗಳ ಕುರಿತು ಸ್ಪರ್ಧೆ ಆಯೋಜಿಸಲಾಗಿದ್ದು, ಜ.09 ರಂದು ಪೌಷ್ಟಿಕ ಆಹಾರ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ ಎಂದರು.
ಝರೀನಾ ಬೇಗಂ ಮಾತನಾಡಿ, ವಿವಿಧ ಬಣ್ಣ, ಹೂ, ಹಣ್ಣುಗಳ ಮೂಲಕ ಚಿತ್ರ ಬಿಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರರು ಇದ್ದರು.
ಅದೇರೀತಿಯಾಗಿ ಜ.09 ರಂದು ಕೇಂದ್ರ, ರಾಜ್ಯ ಪುರಸ್ಕೃತ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸಲು ಮಾಧ್ಯಮ ಪ್ರತಿನಿಧಿಗಳಿಗೆ ‘ವಾರ್ತಾಲಾಪ’ ಕಾರ್ಯಾಗಾರ ಹಮ್ಮಿಕೊಂಡಿದೆ. ಜೊತೆಗೆ ಮೂರು ದಿನಗಳ ವಸ್ತು ಪ್ರದರ್ಶನವೂ ನಡೆಯಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 