ಬಳ್ಳಾರಿ

ಈಗಿರುವ ಆಡಳಿತ ಸಮಿತಿಯನ್ನೇ ಮರುನೇಮಕ ಮಾಡಿ ; ಬಾಣಾಪುರ ನಾಗರಾಜ್

ಈಗಿರುವ ಆಡಳಿತ ಸಮಿತಿಯನ್ನೇ ಮರುನೇಮಕ ಮಾಡಿ ; ಬಾಣಾಪುರ ನಾಗರಾಜ್

               ಬಳ್ಳಾರಿ 20:  ಜಿಲ್ಲೆಯಲ್ಲಿ ಹಾಲಿ ಇರುವ ಗ್ರಾಮ ಪಂಚಾಯಿತಿಗಳ ಸದಸ್ಯರ ಅವಧಿ ಮುಗಿದಿದ್ದು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಬದಲು ಈಗಿರುವ ಆಡಳಿತ ಸಮಿತಿಯನ್ನೇ ಮರುನೇಮಕ ಮಾಡಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಬಾಣಾಪುರ ನಾಗರಾಜ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಅವರು ಇಂದು ನಗರದ ಪತ್ರಿಕ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, 16 ಜನವರಿ 2026 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿ್ತು್ತ್ಖ್ಕೂಹಿ1993್ಘ ಪ್ರಕರಣ 8(1)ಬಿ() ಅಡಿಯಲ್ಲಿ ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ,ಆದರೆ ಪಂಚಾಯತ್ ರಾಜ್ ಅಧಿನಿಯಮದ 8(1)ಬಿ() ರ ಪ್ರಕಾರ, ಚುನಾಯಿತರಾಗಲು ಅರ್ಹರಾದ ವ್ಯಕ್ತಿಗಳನ್ನೊಳಗೊಂಡ ಆಡಳಿತ ಸಮಿತಿಯನ್ನು ನೇಮಕ ಮಾಡಲು ಕಾನೂನು ಅವಕಾಶವಿದೆ.

               ಪ್ರಜಾಪ್ರಭುತ್ವದ ತಳಹದಿಯಾದ ಗ್ರಾಮ ಪಂಚಾಯತಿಗಳಲ್ಲಿ ಜನಪ್ರತಿನಿಧಿಗಳಿಗೆ ಅವಕಾಶ ನೀಡದೆ, ಅಧಿಕಾರಿಗಳ ಮೂಲಕ ಆಡಳಿತ ನಡೆಸುವುದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆರೋಪಿಸಿದ ಅವರು, ಈ ನಿರ್ಧಾರವನ್ನು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ತೀವ್ರವಾಗಿ ವಿರೋಧಿಸುತ್ತದೆ, 2020ರಲ್ಲಿ ಕೋವಿಡ್ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಾಧ್ಯವಾಗದ ಸಂದರ್ಭದಲ್ಲೂ, ಅಂದಿನ ವಿರೋಧ ಪಕ್ಷದ ನಾಯಕರು ಹಾಗೂ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿದ್ದ ಇಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಗ್ರಾಮ ಪಂಚಾಯತಿಗಳು ಪ್ರಜಾಪ್ರಭುತ್ವದ ತಳಪಾಯವಾಗಿದ್ದು, ಆಡಳಿತಾಧಿಕಾರಿಗಳನ್ನು ನೇಮಿಸದೆ ಆಡಳಿತ ಸಮಿತಿಯ ಅವಧಿಯನ್ನು ಆರು ತಿಂಗಳು ವಿಸ್ತರಿಸಬೇಕು ಎಂದು ಮೇ 12, 2020 ರಂದು ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಒತ್ತಾಯಿಸಿದ್ದರು ಎಂಬುದನ್ನು ಸರ್ಕಾರ ನೆನಪಿಸಿಕೊಳ್ಳಬೇಕು ಅಲ್ಲದೇ, 1990ರ ದಶಕದಲ್ಲೂ ಗ್ರಾಮ ಪಂಚಾಯತಿಗಳ ಅವಧಿಯನ್ನು ವಿಸ್ತರಿಸಿರುವ ಉದಾಹರಣೆಗಳಿರುವುದನ್ನು ಸರ್ಕಾರದ ಗಮನಕ್ಕೆ ತಂದರು.

              ಇದೇ ವೇಳೆ ಗ್ರಾಮ ಪಂಚಾಯತಿಗಳಲ್ಲಿ ಶಾಸಕರ ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಂದು ಹೇಳಿಕೊಳ್ಳುವ ಕೆಲವರು, ಯಾವುದೇ ಧರಪಟ್ಟಿ ಆಹ್ವಾನಿಸದೆ, ಮಾರುಕಟ್ಟೆ ದರಕ್ಕಿಂತ ನಾಲ್ಕು ಪಟ್ಟು ಹೆಚ್ಚಿನ ದರದಲ್ಲಿ ಸಾಮಾಗ್ರಿಗಳನ್ನು ಪಂಚಾಯತಿಗಳ ಮೇಲೆ ಹೇರಿಕೆ ಮಾಡುತ್ತಿರುವುದಾಗಿ ಗಂಭೀರ ಆರೋಪ ಮಾಡಿದರು. ಸಾಮಾಗ್ರಿಗಳನ್ನು ನೇರವಾಗಿ ಪಂಚಾಯತಿ ಕಚೇರಿಗಳಿಗೆ ತಂದು ಇಳಿಸಿ, ನಂತರ ಅವುಗಳಿಗೆ ಹಣ ಪಾವತಿಸಲು ಶಾಸಕರು, ಅವರ ಪಿ.ಎ.ಗಳು ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಮೇಲಾಧಿಕಾರಿಗಳ ಮುಖಾಂತರ ಒತ್ತಡ ಹಾಕಲಾಗುತ್ತಿದೆ ಎಂದರು.ಈ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

            ಈ ಅಕ್ರಮಗಳ ಕುರಿತು ಕ್ರಮ ಜರುಗಿಸದೇ ಇರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ತಮ್ಮ ಒಕ್ಕೂಟದ ಮೂಲಕ ಒತ್ತಾಯಿಸುತ್ತಿರುವುದಾಗಿ ತಿಳಿಸಿದರು.ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಪ್ರಜಾಪ್ರಭುತ್ವ ವಿರೋಧಿ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ಹಿಂಪಡೆದು, ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳ ಈಗಿನ ಆಡಳಿತ ಸಮಿತಿಯನ್ನು ಪುನರ್ ನೇಮಕ ಮಾಡಬೇಕು ಎಂದು ಅವರು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಬಾಣಾಪುರ ನಾಗರಾಜ್, ರಾಜ್ಯ ಖಜಾತಿ ಹೇಮಲತಾ ಮಂಜುನಾಥ್, ಜಿಲ್ಲಾ ಜಂಟಿ ಕಾರ್ಯದರ್ಶಿ ಯು ಗಣೇಶ್, ಅಮರಾಪುರ ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮಿ ರೆಡ್ಡಿ, ಶ್ರೀಧರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ