ಜುಲೈ 27ರಂದು ಕಮಲಾಪುರದಲ್ಲಿ ಗ್ರೇಟ್ ಇಂಡಿಯನ್ ಬಸ್ಟರ್ಡ್ ಸಂರಕ್ಷಣೆಗೆ ಪ್ರಾದೇಶಿಕ ಕಾರ್ಯಾಗಾರ
Regional workshop on Great Indian Bustard conservation in Kamalapura on July 27
ಬಳ್ಳಾರಿ 25: ಕರ್ನಾಟಕ ಅರಣ್ಯ ಇಲಾಖೆಯ ಬಳ್ಳಾರಿ ವಿಭಾಗದ ವತಿಯಿಂದ ಅಳಿವಿನಂಚಿನಲ್ಲಿರುವ ಅಪರೂಪದ ಪಕ್ಷಿ ಗ್ರೇಟ್ ಇಂಡಿಯನ್ ಬಸ್ಟರ್ಡ್ ಸಂರಕ್ಷಣೆ, ಅದರ ಮುಂದಿರುವ ಸವಾಲುಗಳು ಹಾಗೂ ದೀರ್ಘಕಾಲೀನ ಸಂರಕ್ಷಣಾ ಕಾರ್ಯತಂತ್ರಗಳ ಕುರಿತು ಜುಲೈ 27ರಂದು ಕಮಲಾಪುರದ ದರೋಜಿ ಕರಡಿ ಧಾಮ ಪ್ರಕೃತಿ ನಿರೂಪಣಾ ಕೇಂದ್ರದಲ್ಲಿ ಪ್ರಾದೇಶಿಕ ಕಾರ್ಯಾಗಾರ ಆಯೋಜಿಸಲಾಗಿದೆ.
ಕಾರ್ಯಾಗಾರವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಭಾರತೀಯ ವನ್ಯಜೀವಿ ಸಂಸ್ಥೆ ಹಾಗೂ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ಖ್ಯಾತ ವಿಜ್ಞಾನಿಗಳು ಮತ್ತು ಸಂರಕ್ಷಣಾ ತಜ್ಞರು ಭಾಗವಹಿಸಿ, ಗ್ರೇಟ್ ಇಂಡಿಯನ್ ಬಸ್ಟರ್ಡ್ ಸಂರಕ್ಷಣೆಗೆ ಸಂಬಂಧಿಸಿದ ತಮ್ಮ ಅನುಭವಗಳು ಹಾಗೂ ವೈಜ್ಞಾನಿಕ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ.
ಕಾರ್ಯಾಗಾರದ ಪ್ರಮುಖ ಉದ್ದೇಶಗಳು:
ಸಿಗ್ರೇಟ್ ಇಂಡಿಯನ್ ಬಸ್ಟರ್ಡ್ನ ಪ್ರಸ್ತುತ ಸ್ಥಿತಿ ಮತ್ತು ಸಂರಕ್ಷಣಾ ಕ್ರಮಗಳ ಕುರಿತು ಮಾಹಿತಿ ವಿನಿಮಯ.
ಸಿಅಳಿವಿನಂಚಿನಲ್ಲಿರುವ ಈ ಪಕ್ಷಿ ಎದುರಿಸುತ್ತಿರುವ ಅಪಾಯಗಳು ಮತ್ತು ಸಂರಕ್ಷಣೆಯ ಅವಕಾಶಗಳ ಕುರಿತು ಚರ್ಚೆ.
ಸಿವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಅದರ ಆವಾಸಸ್ಥಳಗಳ ಪುನಶ್ಚೇತನಕ್ಕೆ ಪ್ರಾದೇಶಿಕ ಮಟ್ಟದಲ್ಲಿ ಕಾರ್ಯತಂತ್ರ ರೂಪಿಸುವುದು.
12 ಜಿಲ್ಲೆಗಳ ಅಧಿಕಾರಿಗಳ ಭಾಗವಹಿಸುವಿಕೆ
ಉತ್ತರ ಕರ್ನಾಟಕದ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದ 12 ಜಿಲ್ಲೆಗಳ ಅರಣ್ಯಾಧಿಕಾರಿಗಳು ಮತ್ತು ಜಿಲ್ಲಾ ಆಡಳಿತದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಭಾಗವಹಿಸುವ ಜಿಲ್ಲೆಗಳು: ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ.
ಇದರೊಂದಿಗೆ ಪೊಲೀಸ್ ಮಹಾನೀರೀಕ್ಷಕರು, ಬಳ್ಳಾರಿ ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಗಳು, 12 ಜಿಲ್ಲೆಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಆಯ್ದ ವಲಯ ಅರಣ್ಯಾಧಿಕಾರಿಗಳು ಹಾಗೂ ಉಪ ವಲಯ ಅರಣ್ಯಾಧಿಕಾರಿಗಳು ಸಹ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 