ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಮನವಿ

ಲೋಕದರ್ಶನ ವರದಿ

ಬಳ್ಳಾರಿ 07: ವೇತನ ತಾರತಮ್ಯ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿಗಳ ಕಾಯರ್ಾಲಯದಲ್ಲಿರುವ ತಹಶೀಲ್ದಾರ್ ಮೆಹತಾ ಅವರ ಮೂಲಕ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ರಾಜಣ್ಣ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮನವಿ ಪತ್ರವನ್ನು ರಾಜ್ಯದ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕಳುಹಿಸಿದರು. 

ರಾಜ್ಯ ಸಂಘದ ನಿಧರ್ಾರದ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಘದ ಜಿಲ್ಲಾ ಪದಾಧಿಕಾರಿಗಳು ಮನವಿ ಪತ್ರವನ್ನು ಸಲ್ಲಿಸಲು ತೀರ್ಮಾನಿಸಿದ್ದು, ಅದರಲ್ಲಿ ಬಳ್ಳಾರಿಯಲ್ಲಿಯೂ ಜಿಲ್ಲಾ ಘಟಕದ ಪದಾಧಿಕಾರಿಗಳು ಮುಖ್ಯ ಮಂತ್ರಿಗಳಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿದರ್ೇಶಕರಿಗೆ ಮನವಿ ಪತ್ರವನ್ನು ಸಲ್ಲಿಸಿದರು. 

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಸಂಘವು ಅನೇಕ ಬಾರಿ ಸರ್ಕಾರಕ್ಕೆ, ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಲಿಖಿತ ರೂಪದ ಮನವಿ ಸಲ್ಲಿಸಿದ್ದರೂ ಯಾವುದೇ ಸಕಾರಾತ್ಮಕವಾದ ಪ್ರಯೋಜನವಾಗಿಲ್ಲ. ಸಂಘವು 2016ರಲ್ಲಿ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಿ ಹೋರಾಟ ನಡೆಸಿದ ಸಂದರ್ಭದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಉಪನ್ಯಾಸಕರ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬಗೆಹರಿಸುವುದಾಗಿ ಸಕರ್ಾರವು ಭರವಸೆ ನೀಡಿತ್ತು. ಪ್ರಸ್ತುತ  ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದು, ಅಧಿಕಾರಿ ವರ್ಗದವರು ಪ್ರತಿನಿತ್ಯವೂ ಒಂದಿಲ್ಲೊಂದು ನೂತನ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ. 

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 2019ಮಾರ್ಚ  ತಿಂಗಳಿನ 20 ನೇ ತಾರೀಖು 2018-19ನೇ ಶೈಕ್ಷಣಿಕ ವರ್ಷದ ಕಡೇ ಕರ್ತವ್ಯ ದಿನವೆಂದು ಪ.ಪೂ.ಶಿ ಇಲಾಖೆಯು ಸುತ್ತೋಲೆ ಹೊರಡಿಸಿರುತ್ತದೆ. 2019ನೇ ಸಾಲಿನ ದ್ವಿತೀಯ ಪಿ.ಯು.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಉಪನ್ಯಾಸಕರಿಗೆ ಐಚ್ಚಿಕವಾದುದೆಂದು ಆದೇಶ ಹೊರಡಿಸಬೇಕೆಂದೂ, ಇಲ್ಲದಿದ್ದಲ್ಲಿ ಉಪನ್ಯಾಸಕರ ಸಂಘವು ಯಾವುದೇ ಗತ್ಯಂತರವಿಲ್ಲದೇ, 2019ರ ದ್ವಿತೀಯ ಪಿ.ಯು.ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯಕ್ಕೆ ಇಡೀ ರಾಜ್ಯಾದ್ಯಂತ ಸಾಮೂಹಿಕವಾಗಿ ಗೈರುಹಾಜರಾಗುವ ಪ್ರಕ್ರಿಯೆಯನ್ನು ಕೈಗೊಳ್ಳಬೇಕಾಗುತ್ತದೆ ಮತ್ತು ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಎಲ್ಲಾ ಸಮಸ್ಯೆಗಳಿಗೆ ಇಲಾಖೆಯೇ ಹೊಣೆಗಾರರೇ ಹೊರತು ಉಪನ್ಯಾಸಕರ ಸಂಘವಾಗಲೀ, ಉಪನ್ಯಾಸಕರಾಗಿಲೀ ಜವಾಬ್ದಾರರಲ್ಲವೆಂದು ಹೇಳಿದ್ದಾರೆ.  

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಡಾ.ಎಂ.ರಾಜಣ್ಣ,  ಪ್ರಧಾನ ಕಾರ್ಯದಶರ್ಿ ಅಜರ್ುನ್ ಮನ್ನಾಪೂರ್, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ಎ. ಪಾಷಾ,  ಕಾರ್ಯದರ್ಶಿ  ಬಿ.ಪಿ.ಕಲ್ಲಪ್ಪ ಕಾಯರ್ಾಧ್ಯಕ್ಷ ನವೀನ್ ಕಿಶೋರ್ ಮುಂತಾದವರು ಹಾಜರಿದ್ದರು. 


ಸುದ್ದಿ ಓದಿ