ಮುಂದಗೋಡ

ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿ ಮನವಿ

ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿ ಮನವಿ

ಲೋಕದರ್ಶನ ವರದಿ

ಮುಂಡಗೋಡ:ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಘಟಕದವರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಸಿದರು. 

ಮೇ4ರಂದು ಮಣಿಪುರದಲ್ಲಿ ಕುಕಿ ಜೋ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಸಂಪೂರ್ಣ ಬೆತ್ತಲೆಗೊಳಿಸಿ, ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣವೇ ಗಲ್ಲು ಶಿಕ್ಷೆಗೆ ಒಳಪಡಿಸಬೇಕು. ಕಳೆದ ಮೇ ತಿಂಗಳಿನಿಂದ ಗಲಭೆ, ಕೊಲೆ, ಸುಲಿಗೆಗಳು, ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆದು ಹಿಂಸಾಚಾರದಿಂದ ನಲುಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಮಣಿಪುರ ಸರ್ಕಾರವನ್ನು ವಜಾ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡದೇ ಇರುವ ಮಣಿಪುರ ರಾಜ್ಯಪಾಲರನ್ನು ಕೂಡಲೇ ಕೇಂದ್ರ ಸರ್ಕಾರ ವಾಪಸ್ ಕರೆಯಿಸಿಕೊಳ್ಳಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.  

ಈ ವೇಳೆ ರಾಜ್ಯ ಸಂಘಟನಾ ಸಂಚಾಲಕ ಎಸ್.ಫಕ್ಕೀರಪ್ಪ, ಜಿಲ್ಲಾ ಸಂಚಾಲಕ ಗೋಪಾಲ ನಡಕಿನಮನಿ, ತಾಲೂಕು ಸಂಚಾಲಕ ಜೋಜೆ ಸಿದ್ದಿ, ಎಚ್.ವಾಯ್.ಕಟ್ಟಿಮನಿ, ತಿರುಪತಿ ಕೊಂಡ್ಲಿ, ಪರಶುರಾಮ ಪೂಜಾರ, ಪ್ರಭು ಅರಶಿಣಗೇರಿ, ಕೋಟೇಪ್ಪ ಹರಿಜನ, ಸಂತೋಷ ಕಟ್ಟಿಮನಿ, ಹನುಮಂತ ಹರಿಜನ, ಎಲ್.ನರಸಿಂಹ ಮೂರ್ತಿ , ಸುರೇಶ ತಳವಾರ, ಸಂತೋಷ ಆಲೂರ, ನಾಗರಾಜ ಕಟ್ಟಿಮನಿ, ಯಲ್ಲವ್ವ ಹರಿಜನ, ರತ್ನವ್ವಾ ವಾಲ್ಮೀಕಿ ಹಾಗೂ ಮುಂತಾದವರು ಇದ್ದರು 

ಸುದ್ದಿ ಓದಿ