ದರೂರ ಜಯಂತ್ಯೋತ್ಸವ ನಿಮಿತ್ತ ರಕ್ಷದಾನ ಶಿಬಿರ
Rescue camp on the occasion of Darura Jayanti
ಹಾರೂಗೇರಿ, 28 : ಶ್ರೀ ವೃಷಭೇಂದ್ರ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಬಿ.ಆರ್.ದರೂರ ಸಾಹೇಬರ ನೆನಪಿನಲ್ಲಿ ಅಧ್ಯಕ್ಷ ಗೀರೀಶ ದರೂರ ಅವರು ಪ್ರತಿವರ್ಷ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರ ಏರಿ್ಡಸುತ್ತಿರುವುದು ಸಾಮಾಜಿಕ ಕಳಕಳಿಗೆ ಸಾಕ್ಷಿಯಾಗಿದೆ ಎಂದು ಚಂದ್ರಮಶ್ರೀ ಟ್ರಸ್ಟ್ ವಿಶ್ವಸಂಸ್ಥೆ ಅಧ್ಯಕ್ಷ ಎಸ್.ಎ.ದಟವಾಡ ಹೇಳಿದರು.
ಪಟ್ಟಣದ ಶ್ರೀ ವೃಷಭೇಂದ್ರ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಬಿ.ಆರ್.ದರೂರ ಅವರ ಜಯಂತ್ಯೋತ್ಸವ ನಿಮಿತ್ತ ಹಮ್ಮಿಕೊಳ್ಳಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನವಾಗಿದ್ದು, ರಕ್ತದಾನ ಮಾಡುವುದರಿಂದ ಮತ್ತೊಂದು ಜೀವವನ್ನು ಬದುಕಿಸಿದಂತಹ ಪುಣ್ಯ ಲಭಿಸುತ್ತದೆ. ರಕ್ತದಾನ ಶಿಬಿರದಿಂದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆಯನ್ನು ನೀಗಿಸಬಹುದೆಂದು ಹೇಳಿದರು.
ಮಹಾವಿದ್ಯಾಲಯದ ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಹಾವಿದ್ಯಾಲಯದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು. ಗಣ್ಯರಾದ ಮಹಾವೀರ ದರೂರ, ಅರ್ಜುನ ದರೂರ, ನೇಮಿನಾಥ ನಾಗನೂರ, ಡಾ.ಎ.ಡಿ.ಟೊನಗೆ, ಡಾ.ರಮೇಶ ಕಮತಗಿ, ಡಾ.ವಿನೋದ ಕಾಂಬಳೆ, ಮುಖ್ಯೋಪಾಧ್ಯಾಯ ರವೀಂದ್ರ ಭಾವಿ, ಪ್ರಾಚಾರ್ಯ ಎಸ್.ಎಸ್.ಅಣ್ಣಿಗೇರಿ, ಪ್ರೊ.ಶಂಕರ ಮೊಕಾಸಿ ಮತ್ತಿತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 